ADVERTISEMENT

ಮಹಾರಾಷ್ಟದಲ್ಲಿ ಮೊಸರು ಗಡಿಗೆ ಒಡೆಯುವ ಹಬ್ಬ: ಇಬ್ಬರ ಸಾವು; 117 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 7:58 IST
Last Updated 17 ಆಗಸ್ಟ್ 2025, 7:58 IST
<div class="paragraphs"><p> ಮೊಸರು ಗಡಿಗೆ ಒಡೆಯುವ ಸ್ಪರ್ಧೆ </p></div>

ಮೊಸರು ಗಡಿಗೆ ಒಡೆಯುವ ಸ್ಪರ್ಧೆ

   

ಮುಂಬೈ/ಥಾಣೆ: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಆಚರಿಸಲಾಗುವ ಮೊಸರು ಗಡಿಗೆ ಒಡೆಯುವ ಆಚರಣೆಯಲ್ಲಿ ಇಬ್ಬರು ಮೃತಪಟ್ಟು 117 ಜನರು ಗಾಯಗೊಂಡಿದ್ದಾರೆ.

ಮುಂಬೈ ಹಾಗೂ ಥಾಣೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದು 117 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮೊಸರು ಗಡಿಗೆ ಹೊಡೆಯುವ ಆಚರಣೆಯಲ್ಲಿ ಬಾಲಿವುಡ್ ನಟರಾದ ಗೋವಿಂದ, ಚಂಕಿ ಪಾಂಡೆ ಮತ್ತು ಸುನಿಲ್ ಶೆಟ್ಟಿ ಭಾಗವಹಿಸಿದ್ದರು.

ADVERTISEMENT

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಶಿವಸೇನೆ (ಯುಬಿಟಿ) ಹಾಗೂ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ (ಎಂಎನ್ಎಸ್) ಕೆಲ ನಾಯಕರು ಒಂದೇ ವೇದಿಕೆಯಲ್ಲಿ ಸೇರಿ ಸಂಭ್ರಮದಲ್ಲಿ ಪಾಲ್ಗೊಂಡರು. ಹಾಗೇ ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಎನ್‌ಸಿಪಿಯ ಅಜಿತ್‌ ಪವಾರ್‌ ಸೇರಿದಂತೆ ಹಲವಾರು ನಾಯಕರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.

ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಯುವಕರು ಹಾಗೂ ಯುವತಿಯರ ತಂಡಗಳು ಮಾನವ ಪಿರಮಿಡ್ ರಚಿಸುತ್ತಾರೆ. ನಂತರ ಹಗ್ಗದಲ್ಲಿ ನೇತಾಡುತ್ತಿದ್ದ ಮೊಸರು ಕುಡಿಕೆ ಒಡೆದ ಸಂಭ್ರಮಿಸುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.