ಚಿತ್ರ ಕೃಪೆ: ಪಿಟಿಐ
ಲೇಹ್: ಲಡಾಖ್‌ನ ಖರ್ದುಂಗ್ ಲಾ ಪಾಸ್ ಸೇರಿದಂತೆ ಅನೇಕ ಋತುವಿನ ಮೊದಲ ಹಿಮಪಾತವಾಗಿದೆ. ಬಯಲು ಪ್ರದೇಶಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಇದರ ಪರಿಣಾಮ ಕಳೆದ ತಿಂಗಳು ಲೇಹ್‌ಗೆ ಪ್ರವಾಸಕ್ಕೆ ಬಂದಿದ್ದ ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈ ಲಾಮಾ ಲೇಹ್‌ನಲ್ಲಿ ಸಿಲುಕಿದ್ದಾರೆ.
ಶ್ಯೋಕ್ ಮತ್ತು ನುಬ್ರಾ ಕಣಿವೆಗಳಿಗೆ ಪ್ರವೇಶ ದ್ವಾರವಾಗಿ ಇರುವ ಖರ್ದುಂಗ್ ಲಾ ಶಿಖರ, ಲೇಹ್-ಪಂಗೊಂಗ್ ಸರೋವರ ರಸ್ತೆಯ ಉದ್ದಕ್ಕೂ 17,950 ಅಡಿ ಎತ್ತರದ ಚಾಂಗ್ಲಾ ಶಿಖರ ಮತ್ತು ಝನ್ಸ್ಕಾರ್ ಕಣಿವೆಯ ಪ್ರದೇಶದಲ್ಲಿ ಹಿಮಪಾತವಾಗಿದೆ.
ಲೇಹ್ ಮತ್ತು ಕಾರ್ಗಿಲ್ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಇನ್ನು ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು ಸ್ಥಳೀಯರಿಗೆ ಎಚ್ಚರಿಕೆಯಿಂದಿರಲು ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಲೇಹ್ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಇದರ ಪರಿಣಾಮವಾಗಿ ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈ ಲಾಮಾ ಇನ್ನು ಕೆಲವು ದಿನಗಳ ಕಾರ ಲೇಹ್‌ನಲ್ಲೇ ಉಳಿದುಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.