ಹಲ್ಲೆ (ಪ್ರಾತಿನಿಧಿಕ ಚಿತ್ರ)
ಬಲ್ಲಿಯಾ; ಮದುವೆ ನಡೆಯುತ್ತಿದ್ದ ಸಭಾಂಗಣಕ್ಕೆ ನುಗ್ಗಿದ ಪುರುಷರ ಗುಂಪೊಂದು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ
ಸಭಾಂಗಣದ ವಿಚಾರಕ್ಕೆ ಗಲಾಟೆ ನಡೆದಿದ್ದು, 'ನೀವು ಈ ಸಭಾಂಗಣದಲ್ಲಿ ಮದುವೆ ಹೇಗೆ ನಡೆಸಲು ಸಾಧ್ಯ'? ಎಂದು ದಾಳಿಕೋರರು ಪ್ರಶ್ನಿಸಿದ್ದಾರೆ. ಬಳಿಕ ಏಕಾಏಕಿ ದಲಿತ ಕುಟುಂಬದ ಮೇಲೆ ರಾಡ್ ಸೇರಿದಂತೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಹಲ್ಲೆಗೊಳಗಾದ ಕುಟುಂಬದ ಸದಸ್ಯರರೊಬ್ಬರು ನೀಡಿದ ದೂರನ್ನು ಆಧರಿಸಿ ಐಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು 20ಕ್ಕೂ ಹೆಚ್ಚು ಜನರು ಮದುವೆ ನಡೆಯುತ್ತಿದ್ದ ಜಾಗಕ್ಕೆ ಬಂದು ಗಲಾಟೆ ಮಾಡಿದ್ದು, ಜಾತಿನಿಂದನೆ ಹಾಗೂ ಹಲ್ಲೆ ಮಾಡಿರುವುದರ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪ್ರಕರಣ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.