ADVERTISEMENT

ಉತ್ತರ ಪ್ರದೇಶ: ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬೆಂಕಿ ಹಚ್ಚಿ ಕೊಲೆ ಯತ್ನ

ಪಿಟಿಐ
Published 11 ಸೆಪ್ಟೆಂಬರ್ 2022, 15:51 IST
Last Updated 11 ಸೆಪ್ಟೆಂಬರ್ 2022, 15:51 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಪಿಲಿಭಿತ್‌, ಉತ್ತರ ಪ್ರದೇಶ: ‘ದಲಿತ ಬಾಲಕಿ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಬಳಿಕ ಡೀಸೆಲ್‌ ಸುರಿದು ಬೆಂಕಿ ಹಚ್ಚಿದ್ದಾರೆ. ಆಕೆಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ದಿನೇಶ್‌ಕುಮಾರ್‌ ಪ್ರಭು ತಿಳಿಸಿದ್ದಾರೆ.

‘ಪಿಲಿಭಿತ್‌ ಜಿಲ್ಲೆಯ ಮಾಧವ್‌ ತಾಂಡಾದಲ್ಲಿ ಸೆಪ್ಟೆಂಬರ್‌ 7ರಂದು ಘಟನೆ ಜರುಗಿದೆ. ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಭಾನುವಾರ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT