ಮುಂಬೈ: ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ ಆಚರಿಸಿದ್ದಕ್ಕಾಗಿ 24 ವರ್ಷದ ದಲಿತ ಯುವಕನನ್ನು ಕೊಲೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಬೊಂಧರ್ ಹವೇಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಅಕ್ಷಯ್ ಭಾಲೇರಾವ್ ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಗುರುವಾರ ಮೇಲ್ಜಾತಿ ಸಮುದಾಯದವರೊಬ್ಬರ ಮದುವೆ ನಡೆಯುತ್ತಿತ್ತು. ಆಗ ಅಕ್ಷಯ್ ತಮ್ಮ ಸಹೋದರ ಆಕಾಶ್‌ನೊಂದಿಗೆ ಹೊರಟಿದ್ದರು. ಮದುವೆಯಲ್ಲಿ ಪಾಲ್ಗೊಂಡಿದ್ದ ಆರೋಪಿಗಳು, ಅಕ್ಷಯ್, ಆಕಾಶ್ ಅವರನ್ನು ನೋಡಿದ್ದಾರೆ. ಅಂಬೇಡ್ಕರ್ ಜಯಂತಿ ಆಚರಿಸಿದ್ದಕ್ಕಾಗಿ ಜಗಳ ತೆಗೆದು ಅಕ್ಷಯ್‌ಗೆ ಕತ್ತಿಯಿಂದ ಇರಿದಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.