ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ
ಪಿಟಿಐ ಚಿತ್ರ
ನವದೆಹಲಿ: ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ದಲಿತರು ಸುರಕ್ಷಿತವಾಗಿಲ್ಲ. ಅವರಿಗೆ ನ್ಯಾಯ ಸಿಗುತ್ತಿಲ್ಲ ಎಂಬುದಕ್ಕೆ ಹರಿಯಾಣದ ಐಪಿಎಸ್ ಅಧಿಕಾರಿ ವೈ.ಪವನ್ ಕುಮಾರ್ ಆತ್ಮಹತ್ಯೆ ಪ್ರಕರಣವೇ ಸಾಕ್ಷಿ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಉನ್ನತ ಹುದ್ದೆಗಳನ್ನು ತಲುಪಿದ ನಂತರವೂ ದಲಿತರು ಸುರಕ್ಷಿತವಾಗಿಲ್ಲ. ಅವರಿಗೆ ನ್ಯಾಯವೂ ಸಿಗುತ್ತಿಲ್ಲ ಎಂಬುದಕ್ಕೆ ಈ ಘಟನೆ ಪುರಾವೆಯಾಗಿದೆ. ಇಂತಹ ನಾಚಿಕೆಗೇಡಿನ ಘಟನೆಗಳು ದೇಶ ಮತ್ತು ಸಮಾಜಕ್ಕೆ ಕಪ್ಪು ಚುಕ್ಕೆ ಎಂದು ಗಾಂಧಿ 'ಎಕ್ಸ್' ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಐಪಿಎಸ್ ಅಧಿಕಾರಿ ವೈ.ಪವನ್ ಕುಮಾರ್ ಜಾತಿ ತಾರತಾಮ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ 2001ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕುಮಾರ್ (52) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿಸಿದ್ದಾರೆ.
ವರ್ಗಾವಣೆಗೊಂಡಿರುವ ಹರಿಯಾಣ ಡಿಜಿಪಿ ಶತ್ರುಜೀತ್ ಕಪೂರ್ ಮತ್ತು ರೋಹ್ಟಕ್ ಎಸ್‌ಪಿ ನರೇಂದ್ರ ಬಿಜರ್ನಿಯಾ ಸೇರಿದಂತೆ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಉದ್ದೇಶಿತ ಮಾನಸಿಕ ಕಿರುಕುಳ, ಸಾರ್ವಜನಿಕವಾಗಿ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ.
ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚಂಡೀಗಢದ ವೈ.ಪೂರಣ್ ಕುಮಾರ್ ಅವರ ಕುಟುಂಬವನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದಾರೆ. ಈ ಪ್ರಕರಣ ಸಂಬಂಧ ತ್ವರಿತ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂದು ರಾಹುಲ್ ಒತ್ತಾಯಿಸಿದ್ದಾರೆ.