ADVERTISEMENT

ಉತ್ತರ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಪಿಟಿಐ
Published 12 ಅಕ್ಟೋಬರ್ 2025, 2:14 IST
Last Updated 12 ಅಕ್ಟೋಬರ್ 2025, 2:14 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಲಖನೌ: ಉತ್ತರ ಪ್ರದೇಶದಲ್ಲಿ 16 ವರ್ಷದ 11ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅಪರಿಚಿತ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ದಲಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪತ್ತೆಗಾಗಿ ವಿವಿಧ ತಂಡಗಳನ್ನು ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಥರಾ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಮನೆಯಿಂದ ಹೊರಟಿದ್ದಳು. ಸಮೀಪದ ಪ್ರದೇಶದಲ್ಲಿ ಆಕೆ ಪರಿಚಯಸ್ಥನ ಜೊತೆ ಮಾತನಾಡುತ್ತಿದ್ದರು.

ಈ ವೇಳೆ ಅಲ್ಲಿಗೆ ಬಂದ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಪರಿಚಯಸ್ಥನನ್ನು ಥಳಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಕೃಷ್ಣನಗರದ ಎಸಿಪಿ ವಿಕಾಸ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಈ ಘಟನೆಯನ್ನು ಯಾರಿಗೂ ಹೇಳದಂತೆ ಆರೋಪಿಗಳು ಬೆದರಿಕೆ ಒಡ್ಡಿದ್ದರು ಎನ್ನಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.