ADVERTISEMENT

ಉ.ಪ್ರ: 2ನೇ ತರಗತಿಯ ದಲಿತ ವಿದ್ಯಾರ್ಥಿಯ ತಲೆಯನ್ನು ನೆಲಕ್ಕೆ ಉಜ್ಜಿದ ಶಿಕ್ಷಕ

ಪಿಟಿಐ
Published 7 ಸೆಪ್ಟೆಂಬರ್ 2022, 4:36 IST
Last Updated 7 ಸೆಪ್ಟೆಂಬರ್ 2022, 4:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭದೋಹಿ: ಏಳು ವರ್ಷದ ದಲಿತ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿ, ಆತನ ತಲೆಯನ್ನು ನೆಲಕ್ಕೆ ಉಜ್ಜಿದ ಪೈಶಾಚಿಕ ಕೃತ್ಯ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ವರದಿಯಾಗಿದೆ.

ಹಲ್ಲೆಗೊಳಗಾದ ಬಾಲಕ ಕಿಯೋರೌನಾ ಪ್ರದೇಶದ ಗಂಗಾಪುರ ತಾಲಿಯಾ ಗ್ರಾಮದಲ್ಲಿರುವ ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಓದುತ್ತಿರುವ ಎರಡನೇ ತರಗತಿ ವಿದ್ಯಾರ್ಥಿ. ಮೈದಾನದಲ್ಲಿ ಆಟವಾಡುತ್ತಿದ್ದಾಗ ಬಾಲಕನ ಮೇಲೆ ಶಿಕ್ಷಕ ಹಲ್ಲೆ ನಡೆಸಿದ್ದಾರೆ. ಮುಖದ ಮೇಲೆ ಬಲವಾಗಿ ಗುದ್ದಿದ್ದಾರೆ. ಬಳಿಕ ಕೆಡವಿ, ತಲೆಯನ್ನು ನೆಲಕ್ಕೆ ಉಚ್ಚಿದ್ದಾರೆ ಎಂದು ಸ್ಥಳೀಯ ಪೊಲೀಸ್‌ ಠಾಣೆಯ ಅಧಿಕಾರಿ ಜೈಪ್ರಕಾಶ್‌ ಯಾದವ್‌ ತಿಳಿಸಿದ್ದಾರೆ.

ಬಾಲಕನ ಬಲಗಣ್ಣಿನ ಮೇಲೆ ಬಲವಾದ ಗಾಯವಾಗಿದೆ. ಶಿಕ್ಷಕ ಹಲ್ಲೆ ನಡೆಸಿದ್ದುದ್ದರ ಬಗ್ಗೆ ಬಾಲಕನ ಚಿಕ್ಕಪ್ಪ ದೂರು ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಯಾದವ್‌ ಹೇಳಿದ್ದಾರೆ.

ADVERTISEMENT

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ ಅಧಿಕಾರಿ ಫರಾ ರೈಸ್‌, ಆರೋಪಿ ಶಿಕ್ಷಕನಿಗೆ ನೋಟಿಸ್‌ ನೀಡಲಾಗಿದೆ. ಕೃತ್ಯದ ಕುರಿತು ವಿವರಣ ಸಲ್ಲಿಸುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಖುದ್ದಾಗಿ ಪ್ರಕರಣದ ತನಿಖೆ ನಡೆಸುತ್ತಿದ್ದೇನೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಫರಾ ರೈಸ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.