ಶಾಹಜಾನ್‌ಪುರ: ಇಲ್ಲಿನ ಗ್ರಾಮವೊಂದರಲ್ಲಿ 18 ವರ್ಷದ ದಲಿತ ಯುವತಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ತಿಲ್ಹಾರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸಂಜಯ್ ಕುಮಾರ್ ಮಾತನಾಡಿ, ಯುವತಿಯು ದನಗಳನ್ನು ಮೇಯಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಮನೆಗೆ ಹಿಂದಿರುಗಿದ ನಂತರ ಯುವತಿ ತನ್ನ ಕುಟುಂಬ ಸದಸ್ಯರಿಗೆ ಅತ್ಯಾಚಾರ ನಡೆದಿರುವ ಕುರಿತು ತಿಳಿಸಿದ್ದಾಳೆ. ಈ ಸಂಬಂಧ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.