ಜೈಲು (ಪ್ರಾತಿನಿಧಿಕ ಚಿತ್ರ)
ತಿರುವನಂತಪುರ: ಅಸ್ವಾಭಾವಿಕ ರೀತಿಯಲ್ಲಿ 7 ವರ್ಷದ ಬಾಲಕನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ 46 ವರ್ಷದ ಸುನಿಲ್ ಕುಮಾರ್ ಎಂಬ ನೃತ್ಯ ಶಿಕ್ಷಕನಿಗೆ ಕೇರಳದ ತ್ವರಿತ ವಿಚಾರಣಾ ವಿಶೇಷ ನ್ಯಾಯಾಲಯವು (ಪೋಕ್ಸೊ) ಒಟ್ಟು 52 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಾಧೀಶರಾದ ಅಂಜು ಮೀರಾ ಬಿರ್ಲಾ ಅವರು ಪೋಕ್ಸೊ ಮತ್ತು ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಎಲ್ಲ ಶಿಕ್ಷೆಗಳು ಏಕಕಾಲದಲ್ಲಿ ಜಾರಿಗೆ ಬರುವ ಕಾರಣಕ್ಕೆ ಸುನಿಲ್, ಒಟ್ಟು 20 ವರ್ಷ ಜೈಲುವಾಸ ಅನುಭವಿಸಬೇಕಾಗುತ್ತದೆ. ಜೊತೆಗೆ, ₹3.25 ಲಕ್ಷ ದಂಡವನ್ನೂ ವಿಧಿಸಲಾಗಿದೆ. ಈ ಹಣವನ್ನು ಸಂತ್ರಸ್ತ ಬಾಲಕನಿಗೆ ಪರಿಹಾರವಾಗಿ ನೀಡಲಾಗುವುದು ಎಂದಿತು.
ತನ್ನ ನೃತ್ಯ ಶಾಲೆಗೆ ಬರುತ್ತಿದ್ದ ಬಾಲಕನ ಮೇಲೆ 2017–19ರ ಅವಧಿಯಲ್ಲಿ ಸುನಿಲ್, ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆದರೆ, ಬಾಲಕ ಈ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿರಲಿಲ್ಲ. ತನ್ನ ತಮ್ಮನನ್ನೂ ಇದೇ ನೃತ್ಯ ಶಾಲೆಗೆ ಪೋಷಕರು ಸೇರಿಸುತ್ತಿದ್ದಾರೆ ಎಂದು ತಿಳಿದ ಬಳಿಕ ಸಂತ್ರಸ್ತ ಬಾಲಕನು ತನ್ನ ಮೇಲಾದ ದೌರ್ಜನ್ಯದ ಕುರಿತು ಹೇಳಿದ್ದಾನೆ. ಆ ಬಳಿಕ ಪೊಲೀಸರಿಗೆ ದೂರು ನೀಡಿ, ಪ್ರಕರಣ ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.