ADVERTISEMENT

ಚೀನಾದ ಬಗ್ಗೆ ಮಾತನಾಡಲು ಧೈರ್ಯವಿದೆಯೇ? ಕೇಂದ್ರಕ್ಕೆ ರಾಹುಲ್ ಸವಾಲು

ಏಜೆನ್ಸೀಸ್
Published 31 ಜನವರಿ 2021, 5:19 IST
Last Updated 31 ಜನವರಿ 2021, 5:19 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ   

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚೀನಾ ಸೇನೆಯು ಸಿಕ್ಕಿಂನಲ್ಲಿ ಹೊಸ ರಸ್ತೆ ಹಾಗೂ ಪೋಸ್ಟ್ ಅನ್ನು ನಿರ್ಮಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಆರೋಪ ಮುಂದುವರಿಸಿದ ರಾಹುಲ್ ಗಾಂಧಿ, ಚೀನಾದ ಬಗ್ಗೆ ಮಾತನಾಡಲು ಸರ್ಕಾರಕ್ಕೆ ಧೈರ್ಯವಿದೆಯೇ ಎಂದು ಪ್ರಶ್ನಿಸಿದರು.

ಹೆಚ್ಚು ಭಯಪಡಬೇಡಿ, ಇಂದು ಧೈರ್ಯ ಮಾಡಿ ಚೀನಾದ ಬಗ್ಗೆ ಮಾತನಾಡಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದರು.

ADVERTISEMENT

ಉಪಗ್ರಹ ಚಿತ್ರಗಳಲ್ಲಿ ಸಿಕ್ಕಿಂ ಗಡಿಯಲ್ಲಿ ಚೀನಾ ನೂತನ ರಸ್ತೆ ಹಾಗೂ ಪೋಸ್ಟ್ ನಿರ್ಮಿಸುತ್ತಿದೆ ಎಂಬುದು ಸಾಬೀತಾಗಿದೆ ಎಂಬ ಸುದ್ದಿಯನ್ನು ರಾಹುಲ್ ಗಾಂಧಿ ಲಗತ್ತಿಸಿದ್ದಾರೆ.

ಕಳೆದ ವರ್ಷ ಸಿಕ್ಕಿಂ ಗಡಿ ಪ್ರದೇಶದಲ್ಲಿ ನಡೆದ ಸಂಘರ್ಷದಲ್ಲಿ ಭಾರತ ಸೇನೆಯ ಹಲವಾರು ಸೈನಿಕರು ಗಾಯಗೊಂಡಿದ್ದರು. ಇತ್ತೀಚೆಗಷ್ಟೇ ಸಿಕ್ಕಿಂನ ನಾಕು ಲಾ ಪ್ರದೇಶದಲ್ಲಿ ಮತ್ತೆ ಸಂಘರ್ಷವುಂಟಾಗಿತ್ತು. ಜನವರಿ 20ರಂದು ಲಘು ಸಂಘರ್ಷ ಉಂಟಾಗಿತ್ತು. ಬಳಿಕ ಸ್ಥಳೀಯ ಕಮಾಂಡರ್‌ಗಳು ಮಾತುಕತೆಯ ಮೂಲಕ ವಿವಾದವನ್ನು ಬಗೆಹರಿಸಿದ್ದರು ಎಂಬುದನ್ನು ಭಾರತೀಯ ಸೇನೆಯು ಖಚಿತಪಡಿಸಿತ್ತು.

ಏತನ್ಮಧ್ಯೆ ಭಾರತ ಹಾಗೂ ಚೀನಾ ಶೀಘ್ರವೇ ಪೂರ್ವ ಲಡಾಖ್ ಗಡಿಯಿಂದ ಸೈನ್ಯ ವಾಪಸ್ ಕರೆಯಿಸಿಕೊಳ್ಳಲು ನಿರ್ಧರಿಸಿತ್ತು. ಅಲ್ಲದೆ ರಾಜತಾಂತ್ರಿಕ ಮಾತುಕತೆಯನ್ನು ಮುಂದುವರಿಸಲು ತೀರ್ಮಾನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.