ADVERTISEMENT

ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ: ಪ್ರಜೆಗಳ ಗೌಪ್ಯತೆಗೆ ಧಕ್ಕೆ ಇಲ್ಲ; ಕೇಂದ್ರ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 15:45 IST
Last Updated 27 ನವೆಂಬರ್ 2022, 15:45 IST
   

ನವದೆಹಲಿ: ‘ಪ್ರಜೆಗಳ ಗೌಪ್ಯತೆಗೆ ಧಕ್ಕೆ ತರುವ ಕೆಲಸವನ್ನು ಸರ್ಕಾರ ಮಾಡುವುದಿಲ್ಲ. ಕೆಲ ತುರ್ತು ಸಂದರ್ಭಗಳಲ್ಲಿ ಮಾತ್ರ ಸರ್ಕಾರವು ಪ್ರಜೆಗಳ ವೈಯಕ್ತಿಕ ದತ್ತಾಂಶವನ್ನು ಪಡೆದುಕೊಳ್ಳುತ್ತದೆ’ ಎಂದು ಕೇಂದ್ರ ಸರ್ಕಾರ ಹೇಳಿದೆ.

ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆಯಲ್ಲಿ ಸರ್ಕಾರಿ ಸಂಸ್ಥೆಗಳಿಗೆ ಸಾಕಷ್ಟು ವಿನಾಯಿತಿ ನೀಡಲಾಗಿದೆ ಎಂದು ಆರೋಪ ಕೇಳಿಬರುತ್ತಿರವ ಹಿನ್ನೆಲೆಯಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಇಲ್ಲಿ ನಡೆದ ಕಾರ್ಯಕ್ರವೊಂದರಲ್ಲಿ ಹೀಗೆ ಹೇಳಿದರು.

ರಾಷ್ಟ್ರೀಯ ಭದ್ರತೆ, ಸಾಂಕ್ರಾಮಿಕ, ಆರೋಗ್ಯಸೇವೆ, ನೈಸರ್ಗಿಕ ವಿಕೋಪದಂಥ ಸಂದರ್ಭಗಳಲ್ಲಿ ಮಾತ್ರ ದೇಶದ ಪ್ರಜೆಗಳ ವೈಯಕ್ತಿಕ ದತ್ತಾಂಶವನ್ನು ಸರ್ಕಾರ ಪಡೆಯಬಹುದು ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.