ADVERTISEMENT

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳಿಂದ ಮತ್ತೆ ಮೂವರು ಉಗ್ರರ ಹತ್ಯೆ

ಏಜೆನ್ಸೀಸ್
Published 18 ಜುಲೈ 2020, 2:51 IST
Last Updated 18 ಜುಲೈ 2020, 2:51 IST
ಕಾರ್ಯಾಚರಣೆಯಲ್ಲಿ ನಿರತರಾಗಿರುವ ಭದ್ರತಾ ಪಡೆಯ ಯೋಧರು
ಕಾರ್ಯಾಚರಣೆಯಲ್ಲಿ ನಿರತರಾಗಿರುವ ಭದ್ರತಾ ಪಡೆಯ ಯೋಧರು   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶೋಪಿಯಾನ್‌ ಜಿಲ್ಲೆಯ ಅಮ್‌ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶನಿವಾರ ಮುಂಜಾನೆ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ.

ADVERTISEMENT

ಶುಕ್ರವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಪೊಲೀಸರು ನಡೆಸಿದ್ದ ಕಾರ್ಯಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.