ADVERTISEMENT

ದೆಹಲಿ: ವಾರಾಂತ್ಯ ಕರ್ಫ್ಯೂ ನಿರ್ಬಂಧ ವಾಪಸ್‌

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 20:08 IST
Last Updated 27 ಜನವರಿ 2022, 20:08 IST

ನವದೆಹಲಿ: ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಮತ್ತು ಸಮ–ಬೆಸ ಸಂಖ್ಯೆಗಳ ದಿನದಂದು ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿ ವಿಧಿಸಿದ್ದ ನಿರ್ಬಂಧವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.

ಲೆಫ್ಟಿನಂಟ್‌ ಗವರ್ನರ್ ಅನಿಲ್‌ ಬೈಜಾಲ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಆದರೆ ಶಾಲೆಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಮುಂದೂಡಲಾಗಿದೆ. ಕೋವಿಡ್ ಪರಿಸ್ಥಿತಿ ಸುಧಾರಿಸುತ್ತಿರುವ ಕಾರಣ ಶೇ 50ರಷ್ಟು ಆಸನ ಭರ್ತಿಯೊಂದಿಗೆ ರೆಸ್ಟೋರಂಟ್‌ ಮತ್ತು ಬಾರ್‌ಗಳ ಕಾರ್ಯಾರಂಭಕ್ಕೂ ಅನುಮತಿ ನೀಡಲು ದೆಹಲಿ ಪ್ರಾಕೃತಿಕ ವಿಕೋಪ ನಿರ್ವಹಣಾ ಪ್ರಾಧಿಕಾರ ತೀರ್ಮಾನಿಸಿದೆ. ಸರ್ಕಾರಿ ಕಚೇರಿಗಳು ಶೇ 50ರ ಹಾಜರಿಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT