ADVERTISEMENT

ಜೈಪುರ: ಮೂಕ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪಿಟಿಐ
Published 25 ನವೆಂಬರ್ 2022, 14:19 IST
Last Updated 25 ನವೆಂಬರ್ 2022, 14:19 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜೈಪುರ: ‘ಮಾತು ಬಾರದ, ಕಿವಿ ಕೇಳಿಸದ ಪರಿಶಿಷ್ಟ ಜಾತಿಯ 20 ವರ್ಷದ ಮಹಿಳೆ ಮೇಲೆ ನಾಲ್ಕರಿಂದ ಐದು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಬಾರ್ಮೆರ್ ಜಿಲ್ಲೆಯಲ್ಲಿ ನಡೆದಿದೆ’ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

‘ಧೋರಿಮನ್ನ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಗುರುವಾರ ಮಹಿಳೆ ಮೇಕೆ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ’ ಎಂದು ಸಂತ್ರಸ್ತೆಯ ಕುಟುಂಬದವರು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ಕಾರಿನಲ್ಲಿ ಬಂದಿದ್ದ ಆರೋಪಿಗಳು ಸಂತ್ರಸ್ತೆಯನ್ನು ತಡೆದು ಅತ್ಯಾಚಾರ ನಡೆಸಿದ್ದಾರೆ’ ಎಂದೂ ದೂರಿನಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.