ADVERTISEMENT

ಉತ್ತರಾಖಂಡ ಹಿಮಪಾತ: ಮೃತರ ಸಂಖ್ಯೆ 11ಕ್ಕೆ ಏರಿಕೆ

ಪಿಟಿಐ
Published 25 ಏಪ್ರಿಲ್ 2021, 9:56 IST
Last Updated 25 ಏಪ್ರಿಲ್ 2021, 9:56 IST
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿರುವವರಿಗಾಗಿ ಮುಂದುವರಿದ ರಕ್ಷಣಾ ಕಾರ್ಯಾಚರಣೆ               –ಪಿಟಿಐ ಚಿತ್ರ
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿರುವವರಿಗಾಗಿ ಮುಂದುವರಿದ ರಕ್ಷಣಾ ಕಾರ್ಯಾಚರಣೆ               –ಪಿಟಿಐ ಚಿತ್ರ   

ಗೋಪೇಶ್ವರ: ‘ಉತ್ತರಾಖಂಡದ ಚಮೋಲಿ ಜಿಲ್ಲೆಗೆ ಹೊಂದಿಕೊಂಡಿರುವ ಭಾರತ–ಚೀನಾ ಗಡಿ ಸಮೀಪ ಸಂಭವಿಸಿದ ಹಿಮಪಾತದಲ್ಲಿ ಸಾವಿಗೀಡಾದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ’ ಎಂದು ಅಧಿಕಾರಿಗಳು ಹೇಳಿದರು.

‘ಶನಿವಾರದ ವೇಳೆಗೆ 10 ಮೃತದೇಹಗಳನ್ನು ಪತ್ತೆ ಮಾಡಲಾಗಿತ್ತು. ಭಾನುವಾರ ಮತ್ತೊಂದು ಶವ ಸಿಕ್ಕಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಜಿಲ್ಲೆಯ ವಿಪತ್ತು ನಿರ್ವಹಣಾ ಕಚೇರಿ ತಿಳಿಸಿದೆ.

ಚಮೋಲಿಯ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಸ್ವಾತಿ ಎಸ್‌.ಭಧೌರಿಯಾ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಯಶವಂತ್‌ ಸಿಂಗ್‌ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

‘ಶುಕ್ರವಾರ ಹಿಮಪಾತ ಸಂಭವಿಸಿದಾಗ 430 ಬಾರ್ಡರ್‌ ರೋಡ್‌ ಆರ್ಗನೈಜೇಶನ್‌ (ಬಿಆರ್‌ಒ) ಕಾರ್ಮಿಕರು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು’ ಎಂದು ಉತ್ತರಾಖಂಡದ ಪೊಲೀಸ್‌ ಮುಖ್ಯಸ್ಥ ಅಶೋಕ್‌ ಕುಮಾರ್‌ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.