ADVERTISEMENT

ತಮಿಳುನಾಡು ಕಳ್ಳಬಟ್ಟಿ ದುರಂತ: ಸಾವಿನ ಸಂಖ್ಯೆ 12ಕ್ಕೆ ಏರಿಕೆ, ನಾಲ್ವರು ಪೊಲೀಸರ ಅಮಾನತು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಮೇ 2023, 4:33 IST
Last Updated 15 ಮೇ 2023, 4:33 IST
ಕಳ್ಳಬಟ್ಟಿ ದುರಂತದ ಹಿನ್ನೆಲೆಯಲ್ಲಿ ಸಂತ್ರಸ್ತ ಕುಟುಂಬಸ್ತರು ವಿಲ್ಲುಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಕಳ್ಳಬಟ್ಟಿ ದುರಂತದ ಹಿನ್ನೆಲೆಯಲ್ಲಿ ಸಂತ್ರಸ್ತ ಕುಟುಂಬಸ್ತರು ವಿಲ್ಲುಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.   

ಚೆನ್ನೈ: ಚೆಂಗಲ್‌ಪಟ್ಟು ಮತ್ತು ವಿಲ್ಲುಪುರ ಜಿಲ್ಲೆಗಳಲ್ಲಿ ಸಂಭವಿಸಿದ ಕಳ್ಳಬಟ್ಟಿ ದುರಂತದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಇನ್ಸ್‌ಪೆಕ್ಟರ್‌ಗಳೂ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಿರುವುದಾಗಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರವನ್ನೂ ಘೋಷಣೆ ಮಾಡಲಾಗಿದೆ.

ಈ ಪ್ರಕರಣದಲ್ಲಿ ಅಮ್ರಾನ್‌ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೂ ಕೆಲವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ADVERTISEMENT

ಶನಿವಾರ ರಾತ್ರಿ ವಿಲ್ಲುಪುರ ಜಿಲ್ಲೆಯ ಮರಕ್ಕನಂ ತಾಲ್ಲೂಕಿನ ಇಕ್ಕಿಯಾಕುಪ್ಪಂನಲ್ಲಿ ಕಳ್ಳಬಟ್ಟಿ ಕುಡಿದು ಮಹಿಳೆ ಸಹಿತ ಐವರು ಮೃತಪಟ್ಟಿದ್ದರು. ಹಲವರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಸದ್ಯ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಮೃತರು 45–55 ವರ್ಷ ವಯಸ್ಸಿನವರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.