ADVERTISEMENT

ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸಿ: ಡಿಜಿಸಿಎ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 14:40 IST
Last Updated 8 ಜೂನ್ 2022, 14:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಎಚ್ಚರಿಕೆ ನೀಡಿದ ನಂತರವೂ ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದರೆ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನುಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ತಿಳಿಸಿದೆ.

ಇದೇ 3ರಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ ಡಿಜಿಸಿಎ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ‘ಮಾಸ್ಕ್‌ ಧರಿಸದವರು, ಸ್ವಚ್ಛತೆ ಕಾಪಾಡದವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗಳ್ಳಲು ಗಗನಸಖಿಯರು, ಕ್ಯಾಪ್ಟನ್‌ಗಳು, ಪೈಲಟ್‌ಗಳು, ವಿಮಾನ ನಿಲ್ದಾಣ ಹಾಗೂ ವಿಮಾನದಲ್ಲಿ ನಿಯೋಜಿಸಿರುವ ಸಿಬ್ಬಂದಿಗೆ ಡಿಜಿಸಿಎ ಪ್ರತ್ಯೇಕ ನಿರ್ದೇಶನ ನೀಡಬೇಕು’ ಎಂದು ಹೈಕೋರ್ಟ್‌ ಹೇಳಿತ್ತು.

ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ವಿಮಾನಯಾನ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು ಮತ್ತು ವಿಶೇಷ ಸಂದರ್ಭದಲ್ಲಿ ಅನುಮತಿಯೊಂದಿಗೆ ಮಾತ್ರ ವಿನಾಯಿತಿ ನೀಡಲಾಗುವುದು ಎಂದು ಹೇಳಿದೆ.

ADVERTISEMENT

ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಬೇಕು. ಮಾಸ್ಕ್ ನಿರಾಕರಿಸಿದರೆ ಅಥವಾ ಪ್ರಯಾಣದ ಮಧ್ಯದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ, ಅಂತಹವರನ್ನು ‘ಅಶಿಸ್ತಿನ ಪ್ರಯಾಣಿಕ’ ಎಂದು ಪರಿಗಣಿಸುವಂತೆ ತಿಳಿಸಲಾಗಿದೆ.

ಸಿಐಎಸ್‌ಎಫ್ ಮತ್ತು ಇತರೆ ಪೊಲೀಸ್ ಸಿಬ್ಬಂದಿ ಮಾಸ್ಕ್ ಧರಿಸದವರಿಗೆ ಒಳಗೆ ಪ್ರವೇಶಿಸಲು ಅನುಮತಿ ನೀಡಬಾರದು. ಟರ್ಮಿನಲ್‌ನ ಪ್ರಮುಖ ಸ್ಥಳಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಒದಗಿಸಬೇಕು ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.