ADVERTISEMENT

ಲೋಕಪಾಲ ನೇಮಕಕ್ಕೆ ಒತ್ತಾಯಿಸಿ ಜ 30ರಿಂದ ಅಣ್ಣಾ ಹಜಾರೆ ಉಪವಾಸ

​ಪ್ರಜಾವಾಣಿ ವಾರ್ತೆ
Published 19 ಜನವರಿ 2019, 11:49 IST
Last Updated 19 ಜನವರಿ 2019, 11:49 IST
   

ಮುಂಬೈ: ಲೋಕಪಾಲರ ನೇಮಕಕ್ಕೆ ಒತ್ತಾಯಿಸಿ ಜನವರಿ 30ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿಸಾಮಾಜಿಕಕಾರ್ಯಕರ್ತಅಣ್ಣಾಹಜಾರೆಶನಿವಾರ ಹೇಳಿದ್ದಾರೆ.

ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು ಭ್ರಷ್ಟಾಚಾರ ತಡೆಯುವ ಉದ್ದೇಶದ ಲೋಕಪಾಲ ಸಂಸ್ಥೆ ಸ್ಥಾಪಿಸುವುದಕ್ಕೆ ಸಂಬಂಧಿಸಿದ ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆಗೆ 2013ರಲ್ಲೇ ಅನುಮೋದನೆ ದೊರೆತಿದೆ . 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಲೋಕಪಾಲರ ನೇಮಕ ಮಾಡಲಿದೆ ಎಂಬ ನಿರೀಕ್ಷೆಯನ್ನು ಹೊಂದಲಾಗಿತ್ತು. ಆದರೆ ಮೋದಿ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಏನನ್ನು ಮಾಡಿಲ್ಲ ಎಂದು ಅಣ್ಣಾಹಜಾರೆಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಪಾಲರ ನೇಮಕಕ್ಕೆ ಒತ್ತಾಯಿಸಿ ಆಗ್ರಹಿಸಿ ಜನವರಿ 30ರಿಂದ ರಾಲೇಗಾವ್‌ಸಿದ್ದಿಯಲ್ಲಿಉಪವಾಸ ಸತ್ಯಾಗ್ರಹ ನಡೆಸುವ ನಿರ್ಧಾರ ಮಾಡಿರುವುದಾಗಿ ಅಣ್ಣಾಹಜಾರೆಹೇಳಿದ್ದಾರೆ.

ADVERTISEMENT

ಭ್ರಷ್ಟಾಚಾರತಡೆಸಂಸ್ಥೆಲೋಕಪಾಲದಮುಖ್ಯಸ್ಥರ ನೇಮಕಕ್ಕೆಫೆಬ್ರುವರಿ28ರೊಳಗೆ ಹೆಸರುಗಳನ್ನು ಸೂಚಿಸಬೇಕು ಎಂದು ಶೋಧ ಸಮಿತಿಗೆ ಇತ್ತೀಚೆಗೆಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್‌ ದೇಸಾಯಿ ಅವರು ಶೋಧ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.