ನವದೆಹಲಿ: ಅಂತರರಾಷ್ಟ್ರೀಯ ವಿಮಾನಯಾನ ಪುನರಾರಂಭದ ಬಗ್ಗೆ ಜುಲೈನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್ ಸಿಂಗ್ ಪುರಿ ಮಂಗಳವಾರ ತಿಳಿಸಿದ್ದಾರೆ.
ವಿಮಾನಯಾನ ಕಂಪನಿಗಳು ಹಾಗೂ ಪ್ರಯಾಣಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ವಿಮಾನಯಾನ ಪುನರಾರಂಭದ ದಿನಾಂಕ ನಿಗದಿಪಡಿಸಲು ಸಾಧ್ಯವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
'ನಾವು ದೇಶದೊಳಗೆ ಸುಗಮವಾಗಿ ಮತ್ತು ಸ್ಥಿರವಾಗಿ ವಿಮಾನ ಹಾರಾಟ ನಡೆಸುತ್ತಿದ್ದೇವೆ. ಜೂನ್ 15ರವರೆಗೆ 67,718 ಪ್ರಯಾಣಿಕರೊಂದಿಗೆ 730 ವಿಮಾನಗಳು ನಿರ್ಗಮಿಸಿವೆ. 68,236 ಪ್ರಯಾಣಿಕರೊಂದಿಗೆ 734 ಆಗಮಿಸಿವೆ' ಎಂದು ಪುರಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.