ADVERTISEMENT

ಕೋವಿಡ್: ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಸಿಬಲ್ ಆಗ್ರಹ

ಪಿಟಿಐ
Published 18 ಏಪ್ರಿಲ್ 2021, 7:02 IST
Last Updated 18 ಏಪ್ರಿಲ್ 2021, 7:02 IST
ಕಪಿಲ್‌ ಸಿಬಲ್‌
ಕಪಿಲ್‌ ಸಿಬಲ್‌   

ನವದೆಹಲಿ: ‘ದೇಶದಲ್ಲಿ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವುದರಿಂದ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕು’ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌ ಅವರು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಅಲ್ಲದೆ ಈ ಸಂದರ್ಭದಲ್ಲಿ ಚುನಾವಣಾ ರ‍್ಯಾಲಿಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

‘ಚೇತರಿಕೆಗಿಂತ ವೇಗವಾಗಿ ಸೋಂಕುಗಳು ಹರಡುತ್ತಿವೆ.ಮೋದಿಜೀ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ. ಚುನಾವಣಾ ಆಯೋಗವು ರ‍್ಯಾಲಿಗಳನ್ನು ನಿರ್ಬಂಧಿಸಬೇಕು. ನ್ಯಾಯಾಲಯಗಳು ಜನರ ಜೀವನವನ್ನು ರಕ್ಷಿಸಬೇಕು’ ಎಂದು ಕಪಿಲ್‌ ಸಿಬಲ್‌ ಟ್ವೀಟ್‌ ಮಾಡಿದ್ದಾರೆ.

ADVERTISEMENT

‘ದೇಶದಲ್ಲಿ ಒಂದೇ ದಿನದಲ್ಲಿ 2,61,500 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ2 ಲಕ್ಷಕ್ಕಿಂತ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.