ADVERTISEMENT

ಭಾರತ ಮಾತೆಗೆ ತಮ್ಮನ್ನು ಅರ್ಪಿಸಿಕೊಳ್ಳಿ: ಯುವಪೀಳಿಗೆಗೆ ಅಮಿತ್ ಶಾ ಕರೆ

ಪಿಟಿಐ
Published 13 ಆಗಸ್ಟ್ 2023, 16:24 IST
Last Updated 13 ಆಗಸ್ಟ್ 2023, 16:24 IST
ಗುಜರಾತ್‌ನ ಅಹಮದಾಬಾದ್‌ ನಗರದಲ್ಲಿ ‌ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಭಾನುವಾರ ಆಯೋಜಿಸಿದ್ದ ‘ತಿರಂಗ ಯಾತ್ರೆ’ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಚಾಲನೆ ನೀಡಿದರು. –ಪಿಟಿಐ ಚಿತ್ರ
ಗುಜರಾತ್‌ನ ಅಹಮದಾಬಾದ್‌ ನಗರದಲ್ಲಿ ‌ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಭಾನುವಾರ ಆಯೋಜಿಸಿದ್ದ ‘ತಿರಂಗ ಯಾತ್ರೆ’ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಚಾಲನೆ ನೀಡಿದರು. –ಪಿಟಿಐ ಚಿತ್ರ   

ಅಹಮದಾಬಾದ್‌: ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಲು 25 ವರ್ಷಗಳ ಕಾಲ ‘ಆಜಾದಿ ಕಾ ಅಮೃತ್ ಕಾಲ್‌’ಗಾಗಿ ಭಾರತ ಮಾತೆಗೆ ತಮ್ಮನ್ನು ಅರ್ಪಿಸಿಕೊಳ್ಳುವಂತೆ ದೇಶದ ಯುವಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮನವಿ ಮಾಡಿದ್ದಾರೆ.

 77ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ನಗರದಲ್ಲಿ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಆಯೋಜಿಸಿದ್ದ ‘ತಿರಂಗ ಯಾತ್ರೆ’ಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಮ್ಮ ಯುವ ಪೀಳಿಗೆಗೆ ಈ ‘ಅಮೃತ ಕಾಲ’ ವಿಶೇಷ ಪ್ರಾಮುಖ್ಯತೆ ಹೊಂದಿದೆ. ಹಿಂದಿನ ಯುವ ಪೀಳಿಗೆಯು ದೇಶದ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿ ವಸಾಹತುಶಾಹಿಯ ಸಂಕೋಲೆಯಿಂದ ಭಾರತವನ್ನು ಮುಕ್ತಗೊಳಿಸಿದಂತೆ, ಇಂದಿನ ಯುವ ಪೀಳಿಗೆ 2047ರವರೆಗೆ 25 ವರ್ಷಗಳ ಕಾಲ ಭಾರತ ಮಾತೆಗೆ ತಮ್ಮನ್ನು ಅರ್ಪಿಸಿಕೊಳ್ಳಬೇಕಾಗಿದೆ’ ಅವರು ಹೇಳಿದರು. 

ADVERTISEMENT

‘ನಾವು ಸ್ವತಂತ್ರರಾಗಿರುವುದರಿಂದ ಇನ್ನು ಮುಂದೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡುವ ಅಗತ್ಯವಿಲ್ಲ. ಆದರೆ, ನಮ್ಮ ದೇಶಕ್ಕಾಗಿ ಬದುಕುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ’ ಎಂದು ಶಾ ಹೇಳಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.