ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್, ಕಳೆದ ವರ್ಷದಂತೆಯೇ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿರುವ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿತ್ತು ಎಂದು ಕೇಜ್ರಿವಾಲ್ ಉಲ್ಲೇಖಿಸಿದ್ದಾರೆ.
ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರುವ ಮೂಲಕ ಜನರಜೀವವನ್ನು ಉಳಿಸಬಹುದಾಗಿದೆಎಂದು ಹೇಳಿದ್ದಾರೆ.
ಕಳೆದ ವರ್ಷ ವ್ಯಾಪಾರಿಗಳು ಪಟಾಕಿಗಳನ್ನು ಸಂಗ್ರಹಿಸಿದ ಬಳಿಕ ಮಾಲಿನ್ಯದ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ನಿಷೇಧವನ್ನು ಹೇರಲಾಗಿತ್ತು. ಇದರಿಂದ ವ್ಯಾಪಾರಿಗಳಿಗೆ ನಷ್ಟವುಂಟಾಗಿತ್ತು. ಆದರೆ ಈ ಬಾರಿ ಸಂಪೂರ್ಣ ನಿಷೇಧ ಗಮನದಲ್ಲಿಟ್ಟುಕೊಂಡು ಯಾರೂ ಕೂಡಾ ಶೇಖರಣೆ ಮಾಡಬಾರದು ಎಂದು ವ್ಯಾಪಾರಿಗಳಿಗೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.