ADVERTISEMENT

ಡ್ರಗ್ಸ್‌ ಪ್ರಕರಣ: ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ ಕರಿಷ್ಮಾ ವಿಚಾರಣೆಗೆ ಹಾಜರು

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 10:19 IST
Last Updated 4 ನವೆಂಬರ್ 2020, 10:19 IST
ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ   

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರ ಉದ್ಯಮ ವ್ಯವಸ್ಥಾಪಕಿ ಕರಿಷ್ಮಾ ಪ್ರಕಾಶ್‌ ಮಾದಕ ವಸ್ತುಗಳ ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು ಎದುರು ಬುಧವಾರ ವಿಚಾರಣೆಗೆ ಹಾಜರಾದರು.

ಕಳೆದ ಅಕ್ಟೋಬರ್‌ ತಿಂಗಳಲ್ಲಿ ಕರಿಷ್ಮಾ ಪ್ರಕಾಶ್‌ ಮನೆಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸಿದ ಸಂದರ್ಭದಲ್ಲಿ 1.7ಗ್ರಾಂ ಹಶೀಶ್‌ ಪತ್ತೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಹಲವು ಸಲಸಮನ್ಸ್ ನೀಡಲಾಗಿತ್ತು. ಅವರ ಹೇಳಿಕೆಯನ್ನು ದಾಖಲಿಸಲು ಎನ್‌ಸಿಬಿ ಅನೇಕ ಬಾರಿ ಅವರಿಗೆ ಸಮನ್ಸ್‌ ಕಳುಹಿಸಿದ್ದರೂಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ಎನ್‌ಸಿಬಿ ಮಂಗಳವಾರ ಆರೋಪ ಮಾಡಿತ್ತು. ಇದರ ಬೆನ್ನಲ್ಲೇ ಕರಿಷ್ಮಾ ಪ್ರಕಾಶ್‌ ಬುಧವಾರ ಎನ್‌ಸಿಬಿ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ.

ADVERTISEMENT

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಿಷ್ಮಾ ಪ್ರಕಾಶ್‌ ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ನವೆಂಬರ್‌ 7ರವರೆಗೂ ಅವರನ್ನು ಬಂಧಿಸಿದಿರುವಂತೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.