ADVERTISEMENT

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ: ವಿಚಾರಣೆ ಮುಂದೂಡಿಕೆ

ಪಿಟಿಐ
Published 11 ಫೆಬ್ರುವರಿ 2025, 13:11 IST
Last Updated 11 ಫೆಬ್ರುವರಿ 2025, 13:11 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ಸುಲ್ತಾನಪುರ (ಉತ್ತರ ಪ್ರದೇಶ): ಇಲ್ಲಿನ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಿತು.

ಪ್ರಕರಣದ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಲಾಗಿದೆ. ಬಳಿಕ ಆರೋಪಿಯ ವಿಚಾರಣೆ ನಡೆಯಲಿದೆ ಎಂದು ದೂರುದಾರ ವಿಜಯ್ ಮಿಶ್ರಾ ಪರ ವಕೀಲ ಸಂತೋಷ್‌ ಕುಮಾರ್‌ ಪಾಂಡೆ ಅವರು ತಿಳಿಸಿದರು.

2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ನಾಯಕ ದೂರು ನೀಡಿದ್ದರು.

ADVERTISEMENT

2023 ಡಿಸೆಂಬರ್‌ನಲ್ಲಿ ರಾಹುಲ್ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. 2024ರ ಫೆಬ್ರುವರಿಯಲ್ಲಿ ರಾಹುಲ್ ವಿರುದ್ಧ ಸಮನ್ಸ್ ಜಾರಿಯಾಗಿತ್ತು. ಬಳಿಕ ಜಾಮೀನು ದೊರತಿತ್ತು. ಜುಲೈ 26ರಂದು ರಾಹುಲ್ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.