ಠಾಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಮಹಾರಾಷ್ಟ್ರದ ಭಿವಂಡಿಯ ನ್ಯಾಯಾಲಯವು ಜನವರಿ 7ಕ್ಕೆ ಮುಂದೂಡಿದೆ.
ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆಯಲ್ಲಿ ನಿರತರಾಗಿದ್ದು, ಅವರ ಪರ ವಕೀಲ ನಾರಾಯಣ ಅಯ್ಯರ್ ಅವರುಶನಿವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ರಾಹುಲ್ ಅವರು ತಮ್ಮ ಭಾಷಣದಲ್ಲಿ ಆರ್ಎಸ್ಎಸ್ ಮತ್ತು ಮಹಾತ್ಮ ಗಾಂಧಿ ಅವರ ಸಾವಿನ ಕುರಿತು ನೀಡಿರುವ ಹೇಳಿಕೆಯ ವಿರುದ್ಧ ರಾಹುಲ್ ಕುಂಟೆ ಎಂಬುವವರು ದೂರು ದಾಖಲಿಸಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.