ರಾಹುಲ್ ಗಾಂಧಿ
ಸುಲ್ತಾನ್‌ಪುರ (ಉತ್ತರ ಪ್ರದೇಶ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರದ ವಿಶೇಷ ನ್ಯಾಯಾಲಯವು ಶುಕ್ರವಾರ ಏಪ್ರಿಲ್ 2ಕ್ಕೆ ಮುಂದೂಡಿತು.
ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆಯು ಶುಕ್ರವಾರದಂದೇ ನಡೆಯಬೇಕಿತ್ತು. ಆದರೆ, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ವಿಚಾರಣೆಯನ್ನು ಮುಂದೂಡಬೇಕಾಯಿತು ಎಂದು ಮಿಶ್ರಾ ಪರ ವಕೀಲರಾದ ಸಂತೋಷ್ ಪಾಂಡೆ ತಿಳಿಸಿದರು.
2018ರ ಆಗಸ್ಟ್‌ನಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಫೆ.20ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದ ರಾಹುಲ್ ಅವರಿಗೆ ಜಾಮೀನು ಮಂಜೂರಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.