ADVERTISEMENT

ತರೂರ್‌ ವಿರುದ್ಧ ಮಾನನಷ್ಟ ಮೊಕದ್ದಮೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2018, 6:03 IST
Last Updated 4 ನವೆಂಬರ್ 2018, 6:03 IST
ಶಶಿ ತರೂರ್
ಶಶಿ ತರೂರ್   

ನವದೆಹಲಿ: ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ವಿರುದ್ಧ ದೆಹಲಿಯ ಬಿಜೆಪಿ ಮುಖಂಡ ರಾಜೀವ್‌ ಬಬ್ಬರ್‌ ಎಂಬುವವರು ಇಲ್ಲಿನ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಈಚೆಗೆ ನಡೆದ ಸಾಹಿತ್ಯೋತ್ಸವದಲ್ಲಿ ತರೂರ್‌ ಅವರು, ‘ಆರ್‌ಎಸ್‌ಎಸ್‌ ಮುಖಂಡರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಲಿಂಗದ ಮೇಲೆ ಕುಳಿತ ಚೇಳಿಗೆ ಹೋಲಿಸಿದ್ದರು’ ಎಂದು ಹೇಳಿದ್ದರು. ಈ ಹೇಳಿಕೆಯ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.

ಮಾನನಷ್ಟ ಮೊಕದ್ದಮೆ ನಿಷ್ಪ್ರಯೋಜಕ: ‘ನನ್ನ ವಿರುದ್ಧ ಬಿಜೆಪಿಯವರು ದೆಹಲಿಯ ನ್ಯಾಯಾಲಯದಲ್ಲಿ ಹೂಡಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ನಿಷ್ಪ್ರಯೋಜಕ’ ಎಂದು ಶಶಿ ತರೂರ್‌ ಶನಿವಾರ ಹೇಳಿದ್ದಾರೆ.

ADVERTISEMENT

‘ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ’ ಎಂದೂ ಆರೋಪಿಸಿದ್ದಾರೆ.

ಜಮ್ಮು ಬಳಿ ಹಿಮಪಾತ: 120 ಮಂದಿ ರಕ್ಷಣೆ

ಜಮ್ಮು (ಪಿಟಿಐ): ಉತ್ತರ ಭಾರತದಲ್ಲಿ ಪ್ರಸಕ್ತ ವರ್ಷದ ಮೊದಲ ಹಿಮಪಾತ ಆರಂಭವಾಗಿದೆ. ಜಮ್ಮು ಕಾಶ್ಮೀರದ ಪೂಂಛ್‌ ಜಿಲ್ಲೆಯ ಮೊಘಲ್‌

ರಸ್ತೆಯಲ್ಲಿ ಹಿಮಪಾತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 120 ಜನರನ್ನು ಸೇನೆ ಮತ್ತು ಪೊಲೀಸರ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.