
ದೆಹಲಿ ಸಚಿವೆ ಆತಿಶಿ ಹಾಗೂ ಬಿಜೆಪಿ ಧ್ವಜ
ನವದೆಹಲಿ: ದೆಹಲಿ ಬಿಜೆಪಿ ಘಟಕವು ಸಚಿವೆ ಆತಿಶಿ ಅವರಿಗೆ ಮಾನನಷ್ಟಕ್ಕೆ ಸಂಬಂಧಿಸಿದ ನೋಟಿಸ್ ಕಳುಹಿಸಿದೆ.
ರಾಜಕೀಯ ಭವಿಷ್ಯ ಉಳಿಸಿಕೊಳ್ಳಲು ತಮ್ಮ ಪಕ್ಷ ಸೇರುವಂತೆ ನನ್ನ ಆಪ್ತ ಸಹಾಯಕರೊಬ್ಬರ ಮೂಲಕ ಬಿಜೆಪಿ ನನ್ನನ್ನು ಸಂಪರ್ಕಿಸಿದೆ. ಬಿಜೆಪಿಗೆ ಸೇರದೆ ಹೋದರೆ ಮುಂಬರುವ ದಿನಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ನನ್ನನ್ನೂ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದರು.
ಆತಿಶಿ ಹೇಳಿಕೆ ಸಂಬಂಧ ಬಿಜೆಪಿ ಘಟಕವು ಇದೀಗ ಮಾನನಷ್ಟ ಸಂಬಂಧಿಸಿದ ನೋಟಿಸ್ ಕಳುಹಿಸಿದ್ದು, ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.
‘ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಸಚ್‌ದೇವ, ಆಧಾರರಹಿತ ಆರೋಪಗಳನ್ನು ಮಾಡಿ, ದಾಖಲೆ ಒದಗಿಸಲು ವಿಫಲರಾಗಿರುವ ಆತಿಶಿ ಅವರು, ಕ್ಷಮೆಯಾಚಿಸಬೇಕು. ದೆಹಲಿಯಲ್ಲಿ ಎಎಪಿ ಬಿಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ಅವರು ಹತಾಶೆಯಿಂದಾಗಿ ಈ ರೀತಿ ಸುಳ್ಳು ಆರೋಪ ಮಾಡಿದ್ದಾರೆ ಎಂದರು.
‘ತಮ್ಮ ಹೇಳಿಕೆಯನ್ನು ಹಿಂಪಡೆಯಲು ನೋಟಿಸ್ ನೀಡಲಾಗಿದೆ. ಒಂದು ವೇಳೆ ಆತಿಶಿ ಅವರು ಸುಳ್ಳು ಹೇಳಿಕೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ ಕಾನೂನು ಪ್ರಕ್ರಿಯೆಗೆ ಸಿದ್ಧರಾಗಿ ಎಂದು ಬಿಜೆಪಿ ಪರ ವಕೀಲರೊಬ್ಬರು‘ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.