ADVERTISEMENT

ಸಾವರ್ಕರ್‌ ಕುರಿತು ಹೇಳಿಕೆ: ಖುದ್ದಾಗಿ ಹಾಜರಾಗಲು ರಾಹುಲ್‌‌ ಗಾಂಧಿಗೆ ವಿನಾಯಿತಿ

ಪಿಟಿಐ
Published 18 ಫೆಬ್ರುವರಿ 2025, 14:54 IST
Last Updated 18 ಫೆಬ್ರುವರಿ 2025, 14:54 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

– ಪಿಟಿಐ ಚಿತ್ರ

ಪುಣೆ: ವಿ.ಡಿ. ಸಾವರ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸಾವರ್ಕರ್ ಅವರ ಮೊಮ್ಮಗ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯವು ಶಾಶ್ವತ ವಿನಾಯಿತಿ ನೀಡಿದೆ.

ADVERTISEMENT

ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ವಿನಾಯಿತಿ ನೀಡುವಂತೆ ಕೋರಿ ರಾಹುಲ್ ಪರ ವಕೀಲ ಮಿಲಿಂದ್ ಪವಾರ್ ಅವರು ಕಳೆದ ತಿಂಗಳು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

‘ಆರೋಪಿ ಸ್ಥಾನದಲ್ಲಿರುವವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿದ್ದು, (ರಾಹುಲ್ ಗಾಂಧಿ) ಅವರು ಹಲವು ಸಭೆಗಳಿಗೆ ಹಾಜರಾಗಬೇಕಿರುತ್ತದೆ. ಹಾಗಾಗಿ ಅವರಿಗೆ ಖುದ್ದು ಹಾಜರಾಗಲು ವಿನಾಯಿತಿ ನೀಡಲಾಗಿದೆ’ ಎಂದು ಜನಪ್ರತಿನಿಧಿಗಳು ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಅಮೋಲ್ ಶಿಂದೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಝಡ್-ಪ್ಲಸ್ ಶ್ರೇಣಿಯ ಭದ್ರತೆಗೆ ಒಳಪಟ್ಟಿರುವವರಾಗಿದ್ದಾರೆ. ಅವರು ವಿಚಾರಣೆಗೆ ಹಾಜರಾಗುವ ವೇಳೆ ಅವರ ಭದ್ರತಾ ವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆಗೆ ತಗಲುವ ವೆಚ್ಚವನ್ನು ಪರಿಗಣಿಸಿ ನ್ಯಾಯಾಲಯವು ಪ್ರಕರಣದಲ್ಲಿ ರಾಹುಲ್‌ಗೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.