ADVERTISEMENT

ಮಾನಹಾನಿ ಪ್ರಕರಣ: ಶಿಕ್ಷೆಗೆ ತಡೆ ಕೋರಿದ್ದ ರಾಹುಲ್ ಗಾಂಧಿ, ಇಂದು ಹೈಕೋರ್ಟ್‌ ತೀರ್ಪು?

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 23:30 IST
Last Updated 6 ಜುಲೈ 2023, 23:30 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   ಪಿಟಿಐ ಚಿತ್ರ

ಅಹಮದಾಬಾದ್: ‘ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು’ ಎಂದಿದ್ದ ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್‌, ಶುಕ್ರವಾರ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.

ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್‌, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 2ರಂದೇ ವಿಚಾರಣೆ ಪೂರ್ಣಗೊಳಿಸಿದ್ದು ಆದೇಶವನ್ನು ಕಾಯ್ದಿರಿಸಿದ್ದರು. ಮಧ್ಯಂತರ ಪರಿಹಾರದ ಆದೇಶ ನೀಡಲು ನಿರಾಕರಿಸಿತ್ತು. ಬೇಸಿಗೆ ರಜೆ ಮುಗಿದ ಬಳಿಕವೇ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು.  

ಮಾರ್ಚ್‌ನಲ್ಲಿ ಸೂರತ್‌ನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಈ ಪ್ರಕರಣದಲ್ಲಿ ರಾಹುಲ್‌ ಗಾಂಧಿ ದೋಷಿ ಎಂದು ಆದೇಶ ನೀಡಿತ್ತು. ಐಪಿಸಿ 499, 500ರಡಿ ಎರಡು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಶಿಕ್ಷೆ ಪ್ರಕಟಗೊಂಡ ಮರುದಿನವೇ, ಲೋಕಸಭೆಯ ಸ್ಪೀಕರ್ ಕಾರ್ಯಾಲಯ ಸಂಸದ ಸ್ಥಾನದಿಂದ ಅನರ್ಹಗೊಳಿಸಿತ್ತು.

ADVERTISEMENT

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ರಾಹುಲ್‌ ಏ.20ರಂದು ಸೂರತ್‌ನ ಸೆಷನ್ಸ್‌ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಕೋರ್ಟ್‌, ಹೈಕೋರ್ಟ್‌ಗೆ ಮೊರೆ ಹೋಗುವಂತೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.