ನವದೆಹಲಿ: ಮಾಜಿ ಸಂಸದ ಸಂದೀಪ್ ದೀಕ್ಷಿತ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಆತಿಶಿ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ವಿರುದ್ಧ ಇಲ್ಲಿನ ನ್ಯಾಯಾಲಯವು ಗುರುವಾರ ನೋಟಿಸ್ ಜಾರಿ ಮಾಡಿದೆ.
ಜ.27ರ ಒಳಗಾಗಿ ನೋಟಿಸ್‌ಗೆ ಉತ್ತರ ನೀಡುವಂತೆ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಪಾರಸ್ ದಲಾಲ್ ಅವರು ಇಬ್ಬರೂ ಮುಖಂಡರಿಗೆ ಸೂಚಿಸಿದ್ದಾರೆ.
‘ಸಂದೀಪ್ ದೀಕ್ಷಿತ್ ಅವರು ಬಿಜೆಪಿಯಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ’ ಎಂದು ಆತಿಶಿ ಹಾಗೂ ಸಂಜಯ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.
‘ಉದ್ದೇಶಪೂರ್ವಕವಾಗಿ ನನ್ನ ಹೆಸರಿಗೆ ಮಸಿ ಬಳಿಯಲು ಯತ್ನಿಸಿದ್ದರು’ ಎಂದು ಸಂದೀಪ್ ದೀಕ್ಷಿತ್ ಅವರು ಮಾನನಷ್ಟ ಮೊಕದ್ದಮೆ ಪ‍್ರಕರಣ ದಾಖಲಿಸಿದ್ದರು.
ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಅರವಿಂದ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಕಣಕ್ಕಿಳಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.