ADVERTISEMENT

ದ್ವಿಪಾತ್ರ ಸಾಮರ್ಥ್ಯದ ಕ್ಷಿಪಣಿ: ಬ್ರಹ್ಮೋಸ್ ಏರೋಸ್ಪೇಸ್ ಜತೆ ಒಪ್ಪಂದ

ಪಿಟಿಐ
Published 22 ಸೆಪ್ಟೆಂಬರ್ 2022, 19:30 IST
Last Updated 22 ಸೆಪ್ಟೆಂಬರ್ 2022, 19:30 IST
ನವದೆಹಲಿಯಲ್ಲಿ ಗುರುವಾರ ರಕ್ಷಣಾ ಸಚಿವಾಲಯದ ಅಧಿಕಾರಿಗಳು ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೆಟ್ ಲಿಮಿಟೆಡ್ ಜೆಗೆ ದ್ವಿ ಪಾತ್ರ ಸಾಮರ್ಥ್ಯವುಳ್ಳ ಬ್ರಹ್ಮೋಸ್ ಕ್ಷಿಪಣಿಗಳಿಗೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಸಹಿ ಹಾಕಿದರು –ಪಿಟಿಐ ಚಿತ್ರ 
ನವದೆಹಲಿಯಲ್ಲಿ ಗುರುವಾರ ರಕ್ಷಣಾ ಸಚಿವಾಲಯದ ಅಧಿಕಾರಿಗಳು ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೆಟ್ ಲಿಮಿಟೆಡ್ ಜೆಗೆ ದ್ವಿ ಪಾತ್ರ ಸಾಮರ್ಥ್ಯವುಳ್ಳ ಬ್ರಹ್ಮೋಸ್ ಕ್ಷಿಪಣಿಗಳಿಗೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಸಹಿ ಹಾಕಿದರು –ಪಿಟಿಐ ಚಿತ್ರ    

ನವದೆಹಲಿ: ರಕ್ಷಣಾ ಉತ್ಪಾದನೆ ಸ್ವಾವಲಂಬನೆಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಸಚಿವಾಲಯವು ಗುರುವಾರ ದ್ವಿಪಾತ್ರ ಸಾಮರ್ಥ್ಯವುಳ್ಳ ಬ್ರಹ್ಮೋಸ್ ಕ್ಷಿಪಣಿಗಳಿಗೆ ಸಂಬಂಧಿಸಿದಂತೆ ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ (ಬಿಎಪಿಎಲ್) ಜತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.ಸುಮಾರು ₹1,700 ಕೋಟಿ ವೆಚ್ಚದ ಒಪ್ಪಂದ ಇದಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ರಕ್ಷಣಾ ಸಚಿವಾಲಯವು, ಮೇಲ್ಮೈಯಿಂದ ಮೇಲ್ಮೈಗೆ ಹಾರುವ ಈ ಕ್ಷಿಪಣಿಗಳ ಸೇರ್ಪಡೆಯು ಭಾರತೀಯ ನೌಕಾಪಡೆಯ ಕಾರ್ಯಾಚರಣೆಯ ಸಾಮರ್ಥ್ಯವನ್ನು ಗಮನಾರ್ಹವಾಗಿ ವರ್ಧಿಸಲಿದೆ ಎಂದು ತಿಳಿಸಿದೆ.ಈ ಒಪ್ಪಂದವು ಸ್ಥಳೀಯ ಉದ್ಯಮದ ಸಕ್ರಿಯ ಭಾಗವಹಿಸುವಿಕೆಯ ಜತೆಗೆ ನಿರ್ಣಾಯಕ ಶಸ್ತ್ರಾಸ್ತ್ರ ವ್ಯವಸ್ಥೆ ಮತ್ತು ಮದ್ದುಗುಂಡುಗಳ ಸ್ಥಳೀಯ ಉತ್ಪಾದನೆಗೆ ಮತ್ತಷ್ಟು ಉತ್ತೇಜನವನ್ನು ನೀಡಲಿದೆ ಎಂದೂ ಸಚಿವಾಲಯವು ಹೇಳಿದೆ.

ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೆಟ್ ಲಿಮಿಟೆಡ್ ಭಾರತ ಮತ್ತು ರಷ್ಯಾ ನಡುವಿನ ಜಂಟಿ ಉದ್ಯಮವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.