ಶ್ರೀನಗರ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಅಮರನಾಥ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಸಹ ಸಚಿವರ ಜತೆಗೆ ದೇಗುಲಕ್ಕೆ ಭೇಟಿ ನೀಡಿದ್ದಾರೆ.
ಜಮ್ಮು–ಕಾಶ್ಮೀರದ ಪವಿತ್ರ ಗುಹೆಯಲ್ಲಿ ಅಮರನಾಥನಿಗೆ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಸಚಿವರು ಸುಮಾರು ಒಂದು ಗಂಟೆ ಅಮರನಾಥ ದೇಗುಲದಲ್ಲಿ ತಂಗಿದ್ದರು ಎಂದು ಮೂಲಗಳು ತಿಳಿಸಿವೆ.
ಸದ್ಯಜಮ್ಮು–ಕಾಶ್ಮೀರ ಪ್ರವಾಸದಲ್ಲಿರುವ ಸಚಿವರು ಶುಕ್ರವಾರ ಉನ್ನತ ಸೇನಾಧಿಕಾರಿಗಳ ಜತೆ ಮಾತುಕತೆ ನಡೆಸಿ ರಾಜ್ಯದಲ್ಲಿನ ಒಟ್ಟಾರೆ ಭದ್ರತಾ ಸನ್ನಿವೇಶದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಪಾಕಿಸ್ತಾನದ ದುಷ್ಕೃತ್ಯಗಳಿಗೆ ತಕ್ಕ ತಿರುಗೇಟು ನೀಡುವಂತೆ ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ಜತೆಗಿನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಒಸಿ) ಕಟ್ಟುನಿಟ್ಟಿನ ಕಣ್ಗಾವಲು ಮತ್ತು ಎಚ್ಚರಿಕೆ ವಹಿಸುವಂತೆಯೂ ಸಚಿವರು ಮಾತುಕತೆ ವೇಳೆ ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.