ADVERTISEMENT

Photos| ಲಡಾಖ್‌ನಲ್ಲಿ ರಾಜ‌ನಾಥ್‌ ಸಿಂಗ್‌: ಪ್ಯಾರಾ ಡ್ರಾಪಿಂಗ್‌, ಟಿ–90 ಟ್ಯಾಂಕರ್‌ಗಳ ಸಮರಾಭ್ಯಾಸ ವೀಕ್ಷಣೆ

ಲೇಹ್‌, ಲಡಾಖ್‌ ಮತ್ತು ಜಮ್ಮು ಕಾಶ್ಮೀರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಇಂದು ಲೇಹ್‌ ಮತ್ತು ಲಡಾಖ್‌ಗೆ ಭೇಟಿ ನೀಡಿದ್ದರು. ಅವರ ಜೊತೆಗೆ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಇದ್ದರು.ಲೇಹ್‌ನಲ್ಲಿ ಪ್ಯಾರಾ ಡ್ರಾಪಿಂಗ್‌ (ಪ್ಯಾರಾಚೂಟ್‌ ಮೂಲಕ ಭೂಸ್ಪರ್ಶ ಮಾಡುವುದು) ಕೌಶಲವನ್ನು ರಾಜನಾಥ್‌ ಸಿಂಗ್‌ ವೀಕ್ಷಿಸಿದರು. ನಂತರ ಬಂದೂಕುಗಳನ್ನು ಸ್ವತಃ ಅವರೇ ಪರಿಶೀಲಿಸಿದರು.‘ಗಡಿಯಲ್ಲಿನ ಪರಿಸ್ಥಿತಿ ಪರಿಶೀಲಿಸಲು ಲಡಾಖ್‌ ಮತ್ತು ಜಮ್ಮು–ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದೇನೆ. ಈ ಪ್ರದೇಶಗಳಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸುತ್ತೇನೆ’ ಎಂದು ರಾಜನಾಥ್‌ ಸಿಂಗ್‌ ಪ್ರವಾಸಕ್ಕೂ ಮೊದಲು ಪ್ರತಿಕ್ರಿಯೆ ನೀಡಿದ್ದರು.ಜುಲೈ 3ರಂದು ಪ್ರಧಾನಿ ನರೇಂದ್ರ ಮೋದಿ ಲಡಾಖ್‌ಗೆ ಭೇಟಿ ನೀಡಿ ಸೇನಾ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದ್ದರು.ಜೂನ್ 15ರಂದು ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆ ಪ್ರದೇಶದಲ್ಲಿ ಚೀನಾ ಪಡೆಗಳೊಂದಿಗೆ ನಡೆದಿದ್ದ ಸಂಘರ್ಷದಲ್ಲಿ ಕರ್ನಲ್ ಶ್ರೇಣಿಯ ಅಧಿಕಾರಿ ಸೇರಿ 20 ಮಂದಿ ಯೋಧರು ಹುತಾತ್ಮರಾಗಿದ್ದರು. ಆ ಬಳಿಕ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ವಾಯುಪಡೆ ಹೆಚ್ಚಿನ ಯುದ್ಧವಿಮಾನಗಳನ್ನು ಮುಂಚೂಣಿ ನೆಲೆಗಳಲ್ಲಿ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.#WATCH Ladakh: Defence Minister Rajnath Singh inspects a Pika machine gun at Stakna, Leh. pic.twitter.com/MvndyQcN82— ANI (@ANI) July 17, 2020#WATCH Ladakh: Troops of Indian Armed Forces carry out para dropping exercise at Stakna, Leh in presence of Defence Minister Rajnath Singh, Chief of Defence Staff General Bipin Rawat and Army Chief General MM Naravane. pic.twitter.com/TX4eVOkeT0— ANI (@ANI) July 17, 2020#WATCH Indian Army T-90 tanks and BMP infantry combat vehicles carry out exercise at Stakna, Leh in presence of Defence Minister Rajnath Singh, Chief of Defence Staff General Bipin Rawat and Army Chief General MM Naravane. pic.twitter.com/Psc3CJOWok— ANI (@ANI) July 17, 2020

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 5:45 IST
Last Updated 17 ಜುಲೈ 2020, 5:45 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.