ADVERTISEMENT

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಕೋವಿಡ್ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜನವರಿ 2022, 11:47 IST
Last Updated 10 ಜನವರಿ 2022, 11:47 IST
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌   

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.

ಈ ಕುರಿತು ಸೋಮವಾರ ಟ್ವೀಟ್‌ ಮಾಡಿರುವ ಅವರು, ‘ನನಗೆ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ. ಸೌಮ್ಯ ರೋಗ ಲಕ್ಷಣಗಳನ್ನು ಹೊಂದಿದ್ದೇನೆ. ನಾನೀಗ ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ’ ಎಂದು ತಿಳಿಸಿದ್ದಾರೆ.

‘ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳಲು ಹಾಗೂಪರೀಕ್ಷಿಸಿಕೊಳ್ಳಲು ನಾನು ವಿನಂತಿಸುತ್ತೇನೆ’ ಎಂದೂ ರಾಜನಾಥ್‌ ಸಿಂಗ್‌ ಟ್ವೀಟಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.