ADVERTISEMENT

ಜಮ್ಮು: ರಜೌರಿಗೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದ ರಾಜನಾಥ್ ಸಿಂಗ್

ಪಿಟಿಐ
Published 6 ಮೇ 2023, 9:41 IST
Last Updated 6 ಮೇ 2023, 9:41 IST
ರಾಜನಾಥ ಸಿಂಗ್
ರಾಜನಾಥ ಸಿಂಗ್   (ಸಂಗ್ರಹ ಚಿತ್ರ)

ರಜೌರಿ: ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಗಳಾದ ರಜೌರಿ ಹಾಗೂ ಪೂಂಚ್‌ಗೆ ಶನಿವಾರ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ ಸಿಂಗ್, ಭದ್ರತೆ ಸ್ಥಿತಿಗತಿಯನ್ನು ಪರಿಶೀಲಿಸಿದರು.

ರಜೌರಿ ಜಿಲ್ಲೆಯ ಕಂಡಿ ಅರಣ್ಯ ಪ್ರದೇಶದಲ್ಲಿ ಉಗ್ರರು ಶುಕ್ರವಾರ ನಡೆಸಿದ ಸ್ಫೋಟದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

ರಕ್ಷಣಾ ಸಚಿವರ ಭೇಟಿ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಇದ್ದರು.

ADVERTISEMENT

ಉಗ್ರರ ವಿರುದ್ಧ ಕಾರ್ಯಾಚರಣೆ ಕುರಿತು ಸೈನಿಕರಿಂದಲೂ ರಕ್ಷಣಾ ಸಚಿವರೂ ಮಾಹಿತಿ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಂಡಿ ಅರಣ್ಯ ಪ್ರದೇಶದಲ್ಲಿ 'ಆಪರೇಷನ್ ತ್ರಿನೇತ್ರಾ' ಕಾರ್ಯಾಚರಣೆಯ ವೇಳೆ ಐವರು ಯೋಧರು ಹುತಾತ್ಮರಾಗಿದ್ದು, ಸೇನೆಯ ಮೇಜರ್ ಗಾಯಗೊಂಡಿದ್ದರು.

2021 ಅಕ್ಟೋಬರ್‌ನಿಂದ ಭಯೋತ್ಪಾದಕರು ನಡೆಸಿದ ಎಂಟು ದಾಳಿಗಳಲ್ಲಿ 26 ಯೋಧರು ಸೇರಿದಂತೆ 35 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.