₹79,000 ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಭಾರತ ಒಪ್ಪಿಗೆ
ನವದೆಹಲಿ: ಸೇನಾ ಯುದ್ಧ ಸಾಮರ್ಥ್ಯಗಳನ್ನು ಹೆಚ್ಚಿಸಲು ₹79,000 ಕೋಟಿ ಮೌಲ್ಯದ ಖರೀದಿ ಪ್ರಸ್ತಾವನೆಗಳಿಗೆ ರಕ್ಷಣಾ ಸಚಿವಾಲಯ ಗುರುವಾರ ಅನುಮೋದನೆ ನೀಡಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ.
ನಾಗ್ ಕ್ಷಿಪಣಿಗಳು, ಮೂರೂ ಸಶಸ್ತ್ರ ಪಡೆಗಳು ಬಳಸಬಹುದಾದ ಯುದ್ಧ ಹಡಗುಗಳು ಮತ್ತು ಎಲೆಕ್ಟ್ರಾನಿಕ್ ಗುಪ್ತಚರ ಹಾಗೂ ಕಣ್ಗಾವಲು ವ್ಯವಸ್ಥೆಗಳು ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಸೇನಾ ಹಾರ್ಡ್‌ವೇರ್‌ಗಳ ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
‘ಆಪರೇಷನ್ ಸಿಂಧೂರ’ ನಡೆದ ನಂತರ ಶಸ್ತ್ರಾಸ್ತ್ರಗಳ ಖರೀದಿಗೆ ಸಂಬಂಧಿಸಿದ ಎರಡನೇ ನಿರ್ಧಾರ ಇದಾಗಿದೆ. ಆಗಸ್ಟ್ 5ರಂದು ₹67,000 ಕೋಟಿ ಮೌಲ್ಯದ ಖರೀದಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.