ADVERTISEMENT

ಯಮುನಾ ನದಿ ಸ್ವಚ್ಛತೆಗೆ ಗರಿಷ್ಠ ಆದ್ಯತೆ: ಪರ್ವೇಶ್‌ ವರ್ಮಾ

ಪಿಟಿಐ
Published 9 ಫೆಬ್ರುವರಿ 2025, 6:57 IST
Last Updated 9 ಫೆಬ್ರುವರಿ 2025, 6:57 IST
<div class="paragraphs"><p>ಪರ್ವೇಶ್‌ ವರ್ಮಾ</p></div>

ಪರ್ವೇಶ್‌ ವರ್ಮಾ

   

(ಪಿಟಿಐ ಚಿತ್ರ)

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನೇ ಸೋಲಿಸುವ ಮೂಲಕ ಬಿಜೆಪಿಯ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ನಾಯಕ ಪರ್ವೇಶ್‌ ವರ್ಮಾ, ಯಮುನಾ ನದಿ ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡುವುದಾಗಿ ಇಂದು (ಭಾನುವಾರ) ಹೇಳಿದ್ದಾರೆ.

ADVERTISEMENT

ಹುಟ್ಟೂರಾದ ಮುಂಡಕದಲ್ಲಿ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಸಾಹಿಬ್ ಸಿಂಗ್‌ ವರ್ಮಾ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತಂದೆಯವರ ಕನಸಿನಂತೆ ಅಪೂರ್ಣವಾದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಬದ್ಧರಾಗಿರುವುದಾಗಿ ಅವರು ತಿಳಿಸಿದ್ದಾರೆ.

'ಹಿಂದಿನ ಸರ್ಕಾರದ ಆಡಳಿತದಲ್ಲಿ ದೆಹಲಿಯ ಗ್ರಾಮೀಣ ಪ್ರದೇಶ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ರಸ್ತೆಗಳು ಕೆಟ್ಟ ಸ್ಥಿತಿಯಲ್ಲಿವೆ' ಎಂದು ಅವರು ಹೇಳಿದ್ದಾರೆ.

ಬಿಜೆಪಿಗೆ ದೊರೆತ ಜನ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿರುವ ಅವರು, 'ದೆಹಲಿ ಜನತೆಯ ಆಶೀರ್ವಾದ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಸಮಾಜದ ಎಲ್ಲ ವರ್ಗಗಳ ಕಾಳಜಿ ವಹಿಸುವ ಮೂಲಕ ಸುಂದರವಾದ ದೆಹಲಿ ನಿರ್ಮಿಸಲು ಪರಿಶ್ರಮಿಸುತ್ತೇನೆ' ಎಂದು ಹೇಳಿದ್ದಾರೆ.

ನವದೆಹಲಿ ಕ್ಷೇತ್ರದಲ್ಲಿ ಅರವಿಂದ ಕೇಜ್ರಿವಾಲ್ ವಿರುದ್ಧ ಪರ್ವೇಶ್‌ ವರ್ಮಾ 4,089 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಎಎಪಿಗೆ ದೊಡ್ಡ ಹೊಡೆತ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಪರ್ವೇಶ್‌ ವರ್ಮಾ ಅವರು 2014ರಿಂದ 2024ರವರೆಗೆ ಪಶ್ಚಿಮ ದೆಹಲಿಯ ಸಂಸದರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.