ರಾಹುಲ್ ಗಾಂಧಿ ಅವರನ್ನು ಭೇಟಿಯಾದ ನಿಯೋಗ
ನವದೆಹಲಿ: ಐಸಿಐಸಿಐ ಬ್ಯಾಂಕ್ ಅನ್ಯಾಯವಾಗಿ ವಜಾಗೊಳಿಸಲಾಗಿದೆ ಎಂದು ಆರೋಪಿಸಿರುವ ನೌಕರರ ನಿಯೋಗವು ಶುಕ್ರವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದೆ. ವೈದ್ಯಕೀಯ ರಜೆಯಲ್ಲಿದ್ದಾಗ, ಆಡಳಿತ ಮಂಡಳಿಯ ನೀತಿಗಳನ್ನು ಪ್ರಶ್ನಿಸಿದ್ದಕ್ಕಾಗಿ ಹಠಾತ್ತನೆ ವಜಾಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬ್ಯಾಂಕ್ ನಿಂದ ಅನ್ಯಾಯವಾಗಿ ವಜಾಗೊಳಿಸಲಾಗಿದೆ ಎಂದು ಆರೋಪಿಸಿರುವ ನೌಕರರ ನಿಯೋಗವು ಸಂಸತ್ ಭವನದ ಸಂಕೀರ್ಣದಲ್ಲಿರುವ ರಾಹುಲ್ ಗಾಂಧಿಯವರ ಕಚೇರಿಯಲ್ಲಿ ಭೇಟಿಯಾಯಿತು.
ಈ ಬಗ್ಗೆ ಬ್ಯಾಂಕ್‌ನಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ವೈದ್ಯಕೀಯ, ಅನುಮತಿಸಿದ ರಜೆಯಲ್ಲಿದ್ದಾಗ, ಅಥವಾ ಆಡಳಿತ ಮಂಡಳಿಯ ನೀತಿಗಳನ್ನು ಪ್ರಶ್ನಿಸಿದ್ದಕ್ಕಾಗಿ ಹಠಾತ್ತನೆ ವಜಾಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾಗಿ ಕಾಂಗ್ರೆಸ್‌ನ ಎಕ್ಸ್ ಪೋಸ್ಟ್‌ನಲ್ಲಿ ಹೇಳಲಾಗಿದೆ.
ಇಂತಹ ಪ್ರವೃತ್ತಿ ಕೇವಲ ಐಸಿಐಸಿಐ ಬ್ಯಾಂಕ್‌ಗೆ ಮಾತ್ರ ಸೀಮಿತವಾಗಿಲ್ಲ. ಹೆಚ್ಚಿನ ಲಾಭ ಗಳಿಸುವ ಒತ್ತಡದಿಂದ ಖಾಸಗಿ ಬ್ಯಾಂಕ್‌ಗಳಲ್ಲಿ ಇಂಥ ಬೆಳವಣಿಗೆ ಆಗುತ್ತಿದೆ ಎನ್ನುವುದನ್ನು ನೌಕರರು ರಾಹುಲ್ ಗಾಂಧಿ ಬಳಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.