ಬಂಧನ
(ಪ್ರಾತಿನಿಧಿಕ ಚಿತ್ರ)
ನವದೆಹಲಿ: ವಿದೇಶಗಳಲ್ಲಿ ನೆಲೆಸಿರುವ ಗ್ಯಾಂಗ್‌ಸ್ಟರ್‌ಗಳ ಜೊತೆ ನಂಟು ಹೊಂದಿದ್ದ ಹಾಗೂ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ದೆಹಲಿ ಪೊಲೀಸರ ವಿಶೇಷ ತಂಡ ಎನ್‌ಕೌಂಟರ್ ನಡೆಸಿ ಬಂಧಿಸಿದೆ.
ದೆಹಲಿಯ ಹೊರ ವಲಯದಲ್ಲಿ ಶುಕ್ರವಾರ ಬೆಳಗ್ಗೆ ಬಂಧಿಸಲಾಗಿದೆ. ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹೊಡೆಯಲಾಗಿದ್ದು ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕಾಶ್ ರಜಪೂತ್ ಮತ್ತು ಮಹಿಪಾಲ್ ಬಂಧಿತ ಆರೋಪಿಗಳು, ಇಬ್ಬರೂ ರಾಜಸ್ಥಾನ ಮೂಲದವರಾಗಿದ್ದಾರೆ.
ರಜಪೂತ್ ಮತ್ತು ಮಹಿಪಾಲ್ ವಿರುದ್ಧ ಹರಿಯಾಣ, ಗುಜರಾತ್ ಮತ್ತು ರಾಜಸ್ಥಾನದಲ್ಲಿ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಇವರ ಬಂಧನಕ್ಕೆ ವಾರೆಂಟ್ ಹೊರಡಿಸಲಾಗಿತ್ತು. ಇವರ ಸುಳಿವು ಕೊಟ್ಟವರಿಗೆ ಪೊಲೀಸರು ನಗದು ಬಹುಮಾನ ಘೋಷಣೆ ಮಾಡಿದ್ದರು.
ವಿದೇಶಿ ನಂಟಿನ ಬಗ್ಗೆ ತನಿಖೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.