ADVERTISEMENT

ಕನ್ಹಯ್ಯಾ ವಿರುದ್ಧದ ದೇಶದ್ರೋಹ ಪ್ರಕರಣದ ವಿಚಾರಣೆಗೆ ದೆಹಲಿ ಎಎಪಿ ಸರ್ಕಾರದ ಅನುಮತಿ

ಪಿಟಿಐ
Published 29 ಫೆಬ್ರುವರಿ 2020, 2:39 IST
Last Updated 29 ಫೆಬ್ರುವರಿ 2020, 2:39 IST
   

ನವದೆಹಲಿ: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ ವಿರುದ್ಧ ಮೊಕದ್ದಮೆ ದಾಖಲಿಸಲು ದೆಹಲಿ ಸರ್ಕಾರ ಪೊಲೀಸರಿಗೆ ಅನುಮತಿ ನೀಡಿದೆ.

2016ರಲ್ಲಿನ ಪ್ರಕರಣಇದಾಗಿದೆ. ಜನವರಿ 14ರಂದು ಕುಮಾರ್‌ ಮತ್ತು ಇತರರ ವಿರುದ್ಧ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು. ಇವರಲ್ಲಿ ಎನ್‌ಯು ಮಾಜಿ ವಿದ್ಯಾರ್ಥಿಗಳಾದ ಉಮರ್‌ ಖಲಿದ್‌ ಮತ್ತು ಅನಿರ್ಭನ್‌ ಭಟ್ಟಾಚಾರ್ಯ ಸೇರಿದ್ದಾರೆ.

2016ರ ಫೆಬ್ರುವರಿ 9ರಂದು ವಿಶ್ವವಿದ್ಯಾಲಯದ ಆವರಣದಲ್ಲಿಕುಮಾರ್ ಮತ್ತು ಇತರರು ಮೆರವಣಿಗೆ ನಡೆಸಿದ್ದರು. ಈ ಸಂದರ್ಭದಲ್ಲಿ ದೇಶದ್ರೋಹದ ಘೋಷಣೆಗಳನ್ನು ಇವರು ಬೆಂಬಲಿಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ADVERTISEMENT

ದೆಹಲಿ ಸರ್ಕಾರಕ್ಕೆ ಧನ್ಯವಾದಗಳು

ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಕನ್ಹಯ್ಯಾ ಕುಮಾರ್ ಅವರು, ಕೇಸು ದಾಖಲಿಸಲು ಅನುಮತಿ ನೀಡಿದ ದೆಹಲಿ ಸರ್ಕಾರಕ್ಕೆ ಧನ್ಯವಾದಗಳು. ಗಂಭೀರವಾಗಿರುವ ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ನಾನು ಮನವಿ ಮಾಡುತ್ತೇನೆ. ಇಲ್ಲವಾದರೆ, ಟಿ.ವಿ ಮಾಧ್ಯಮಗಳು ತಮ್ಮ ನ್ಯಾಯಾಲಯದಲ್ಲಿ ತೀರ್ಪು ನೀಡುತ್ತವೆ,‘ ಎಂದು ವ್ಯಂಗ್ಯವಾಡಿದ್ದಾರೆ.

ಕನ್ಹಯ್ಯಾ ಕುಮಾರ್‌ ಪರ ಟ್ವೀಟ್‌ ಮಾಡಿದ್ದ ಕೇಜ್ರಿವಾಲ್‌

ಕನ್ಹಯ್ಯಾ ಕುಮಾರ್‌ ಅವರು ಚರ್ಚೆಯ ಮುನ್ನೆಲೆಗೆ ಬಂದಿದ್ದ ದಿನಗಳಲ್ಲಿ, 2016ರಲ್ಲಿ ಟ್ವೀಟ್‌ವೊಂದನ್ನು ಮಾಡಿದ್ದದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ‘ ಕನ್ಹಯ್ಯಾ ಕುಮಾರ್‌ ಅವರ ಭಾಷಣವನ್ನು ನಾನು ಹಲವು ಬಾರಿ ಕೇಳಿದ್ದೇನೆ. ಸ್ವಷ್ಟ ಚಿಂತನೆಯನ್ನು ಅವರು ಅದ್ಭುತವಾಗಿ ವ್ಯಕ್ತಪಡುತ್ತಾರೆ. ಜನ ಭಾವಿಸುವುದನ್ನೇ ಅವರು ಮಾತನಾಡುತ್ತಾರೆ. ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಟ್ವೀಟ್‌ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.