ADVERTISEMENT

ದೆಹಲಿ: ಎಎಪಿ ನಾಯಕ ಸಂದೀಪ್ ಭಾರದ್ವಾಜ್ ಶವ ಪತ್ತೆ, ಪೊಲೀಸರಿಂದ ತನಿಖೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ನವೆಂಬರ್ 2022, 5:22 IST
Last Updated 25 ನವೆಂಬರ್ 2022, 5:22 IST
ಸಂದೀಪ್ ಭಾರದ್ವಾಜ್
ಸಂದೀಪ್ ಭಾರದ್ವಾಜ್   

ನವದೆಹಲಿ: ನಗರದ ರಾಜೌರಿ ಗಾರ್ಡನ್ ನಿವಾಸದಲ್ಲಿ ಆಮ್ ಆದ್ಮಿ ಪಕ್ಷದ ಟ್ರೇಡ್ ವಿಂಗ್ ಕಾರ್ಯದರ್ಶಿ ಸಂದೀಪ್ ಭಾರದ್ವಾಜ್ (55) ಅವರ ಮೃತದೇಹ ಗುರುವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರದ್ವಾಜ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಕುಕ್ರೇಜಾ ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಾರದ್ವಾಜ್ ಸಾವು ಪ್ರಕರಣಕ್ಕೆ ಸಂಬಂಧಿಸಿ ಅಪರಾಧ ದಂಡ ಸಂಹಿತೆಯ (ಸಿಆರ್‌ಪಿಸಿ) 174 ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಭಾರದ್ವಾಜ್ ಅವರ ನಿಧನಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂತಾಪ ಸೂಚಿಸಿದ್ದಾರೆ.

‘ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತ ಸಂದೀಪ್ ಭಾರದ್ವಾಜ್ ಅವರ ಹಠಾತ್ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಸಂಕಷ್ಟದ ಸಮಯದಲ್ಲಿ ನಮ್ಮ ಪಕ್ಷವು ಕುಟುಂಬ ಸದಸ್ಯರೊಂದಿಗೆ ನಿಂತಿದೆ’ ಎಂದು ಸಿಎಂ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.