ADVERTISEMENT

ದೆಹಲಿ: ಮಿತಿಮೀರಿದ ವಾಯುಮಾಲಿನ್ಯ

ಹವಾಮಾನ

ಪಿಟಿಐ
Published 12 ನವೆಂಬರ್ 2018, 18:45 IST
Last Updated 12 ನವೆಂಬರ್ 2018, 18:45 IST

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಹವಾಮಾನ ಸ್ಥಿತಿಯಲ್ಲಿ ಬದಲಾವಣೆ ಮತ್ತು ತ್ಯಾಜ್ಯಗಳನ್ನು ದಹನ ಮಾಡಿದ್ದರಿಂದ ವಾಯು ಗುಣಮಟ್ಟದಲ್ಲಿ ಕುಸಿತ ಕಂಡಿದೆ.

ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ 423ರಷ್ಟಿತ್ತು ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ದೆಹಲಿಯ 28 ಸ್ಥಳಗಳಲ್ಲಿನ ವಾಯು ಗುಣಮಟ್ಟ ಅಪಾಯದ ಮಟ್ಟ ತಲುಪಿದೆ. ಏಳು ಸ್ಥಳಗಳಲ್ಲಿ ಅತಿ ಕಡಿಮೆ ಗುಣಮಟ್ಟ ಹೊಂದಿದೆ ಎಂದು ಮಂಡಳಿ ತಿಳಿಸಿದೆ.

ADVERTISEMENT

ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ದಹನ ಮಾಡುತ್ತಿರುವುದರಿಂದ ದೆಹಲಿಯ ವಾತಾವರಣದ ಮೇಲೆ ಪರಿಣಾಮ ಬೀರಿದೆ. ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ ಹೇರಬೇಕು ಮತ್ತು ನಗರದಲ್ಲಿ ಲಾರಿಗಳ ಪ್ರವೇಶಕ್ಕೆ ನಿರ್ಬಂಧ ಹೇರಬೇಕು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರವು ಸಂಬಂಧಿಸಿದ ವಿವಿಧ ಇಲಾಖೆಗಳಿಗೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.