ADVERTISEMENT

ದೆಹಲಿ ವಾಯು ಮಾಲಿನ್ಯ: 5ನೇ ತರಗತಿವರೆಗಿನ ಮಕ್ಕಳಿಗೆ ಹೈಬ್ರಿಡ್ ಮಾದರಿಯಲ್ಲಿ ಪಾಠ

ಪಿಟಿಐ
Published 11 ನವೆಂಬರ್ 2025, 9:14 IST
Last Updated 11 ನವೆಂಬರ್ 2025, 9:14 IST
<div class="paragraphs"><p>ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿತ</p></div>

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿತ

   

ಪಿಟಿಐ ಚಿತ್ರ

ನವದೆಹಲಿ: ನಗರದಲ್ಲಿ ವಾಯ ಮಾಲಿನ್ಯ ತೀವ್ರವಾದ ಹಿನ್ನೆಲೆ 5ನೇ ತರಗತಿವರೆಗಿನ ಮಕ್ಕಳಿಗೆ ಹೈಬ್ರಿಡ್‌ ಮಾದರಿಯಲ್ಲಿ ತರಗತಿಗಳನ್ನು ನಡೆಸುವಂತೆ ದೆಹಲಿ ಸರ್ಕಾರ ಶಾಲೆಗಳಿಗೆ ಸೂಚನೆ ನೀಡಿದೆ. 

ADVERTISEMENT

ಶಿಕ್ಷಣ ನಿರ್ದೇಶನಾಲಯ ಹೊರಡಿಸಿದ ಆದೇಶದಲ್ಲಿ,  DoE, NDMC, MCD ಮತ್ತು ದೆಹಲಿ ಕಂಟೋನ್ಮೆಂಟ್ ಮಂಡಳಿಯ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಎಲ್ಲಾ ಮುಖ್ಯಸ್ಥರಿಗೆ ಹೈಬ್ರಿಡ್ ಮಾದರಿಯಲ್ಲಿ 5 ನೇ ತರಗತಿಯವರೆಗಿನ ಮಕ್ಕಳಿಗೆ ಪಠ್ಯ ಬೋಧಿಸುವಂತೆ ನಿರ್ದೇಶಿಸಲಾಗಿದೆ.

ಹೈಬ್ರಿಡ್ ಮಾದರಿಯಲ್ಲಿ ಭೌತಿಕ ಮತ್ತು ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುತ್ತದೆ. ಸಾಧ್ಯವಿರುವ ತರಗತಿಗಳಿಗೆ ಆನ್‌ಲೈನ್‌ ಪಾಠ ಮಾಡುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೋಮವಾರ ತೀರಾ ಕಳಪೆ ಮಟ್ಟಕ್ಕೆ ಕುಸಿದಿತ್ತು. ಗಾಳಿಯ ಗುಣಮಟ್ಟದ ಸೂಚ್ಯಂಕ (ಎಕ್ಯೂಐ) 425ಕ್ಕೆ ತಲುಪಿದೆ. ಜನರು ಉಸಿರಾಡಲು ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. 

ದೆಹಲಿಯ ವಾಯುಮಾಲಿನ್ಯದ ವಿಚಾರವು ಸಾಮಾಜಿಕ ಮಾಧ್ಯಮದಲ್ಲಿ ‘ಮೀಮ್‌’ಗಳ ಮೂಲಕವೂ ಸದ್ದು ಮಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.