
ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ವಾಯು ಮಾಲಿನ್ಯ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ ಪ್ರಯೋಗಿಸಿದ 15 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.
ಭಾನುವಾರ ಇಂಡಿಯಾ ಗೇಟ್ ಬಳಿ ಪ್ರತಿಭಟನಾಕಾರರು ರಸ್ತೆ ತಡೆ ಮಾಡಿದ್ದರು. ಇದೇ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.
ಪ್ರತಿಭಟನಾಕಾರರು ಸಿ–ಹೆಕ್ಸಾಗಾನ್ ಹತ್ತಿರ ತೆರಳಿದಾಗ, ಆ್ಯಂಬ್ಯುಲೆನ್ಸ್ ಹಾಗೂ ವೈದ್ಯಕೀಯ ಸೇವೆಗಳಿಗೆ ಅಡೆತಡೆಯಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಕೆಲವು ಪ್ರತಿಭಟನಾಕಾರರು ಕರ್ತವ್ಯ ನಿರತ ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ ಪ್ರಯೋಗಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇಂಡಿಯಾ ಗೇಟ್ ಬಳಿ ಶುದ್ಧ ಗಾಳಿಗಾಗಿ ದೆಹಲಿ ಸಮನ್ವಯ ಸಮಿತಿಯ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ಗಾಳಿಯ ಗುಣಮಟ್ಟ ತೀವ್ರ ಕಳಪೆ ಮಟ್ಟಕ್ಕೆ ತಲುಪಿದ್ದು, ಇದು ನಾಗರಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮಾಲಿನ್ಯ ನಿಯಂತ್ರಿಸುವಲ್ಲಿ ದೀರ್ಘಾವಧಿಯ ಪರಿಹಾರಗಳನ್ನು ತೆಗೆದುಕೊಳ್ಳಲು ಆಡಳಿತವು ವಿಫಲವಾಗಿದೆ ಎಂದು ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.