ADVERTISEMENT

ದೆಹಲಿಯನ್ನಾವರಿಸಿದ ದಟ್ಟ ಮಂಜು: 30 ವಿಮಾನಗಳು ವಿಳಂಬ, 2 ಮಾರ್ಗ ಬದಲು

ಪಿಟಿಐ
Published 26 ಡಿಸೆಂಬರ್ 2023, 5:43 IST
Last Updated 26 ಡಿಸೆಂಬರ್ 2023, 5:43 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ದಟ್ಟವಾದ ಮಂಜಿನಿಂದಾಗಿ ಮಂಗಳವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಮಾರ್ಗವನ್ನು ಬದಲಿಸಲಾಗಿದ್ದು, ಸುಮಾರು 30 ವಿಮಾನಗಳು ವಿಳಂಬಗೊಂಡಿವೆ.

ಇಂಡಿಗೋ ಮತ್ತು ಸ್ಪೈಸ್‌ಜೆಟ್‌ನ ತಲಾ ಒಂದು ವಿಮಾನವನ್ನು ಜೈಪುರಕ್ಕೆ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ದೆಹಲಿ ವಿಮಾನ ನಿಲ್ದಾಣದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ಸುಮಾರು 30 ವಿಮಾನಗಳು ವಿಳಂಬವಾಗಿವೆ.

'ಕಡಿಮೆ ಗೋಚರತೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸುಮಾರು 30 ವಿಮಾನಗಳ ಆಗಮನ ಮತ್ತು ನಿರ್ಗಮನ ಎರಡರಲ್ಲೂ ವಿಳಂಬವಾಗಲಿದೆ. ನವೀಕರಿಸಿದ ಮಾಹಿತಿಗಾಗಿ ಪ್ರಯಾಣಿಕರು ಸಂಬಂಧಿಸಿದ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ. ಉಂಟಾದ ಯಾವುದೇ ಅಡಚಣೆಗೆ ತೀವ್ರವಾಗಿ ವಿಷಾದಿಸುತ್ತೇವೆ' ಎಂದು ದೆಹಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (DIAL) ಸಾಮಾಜಿಕ ಮಾಧ್ಯಮ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

ಇಂದು ಬೆಳಿಗ್ಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ದಟ್ಟವಾದ ಮಂಜು ಕಂಡುಬಂದಿದೆ. ತಾಪಮಾನ ಸುಮಾರು 7 ಡಿಗ್ರಿಗಳಿಗೆ ಇಳಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.