
ಪಿಟಿಐ
ನವದೆಹಲಿ: ದಟ್ಟವಾದ ಮಂಜಿನಿಂದಾಗಿ ಇಂದು (ಶನಿವಾರ) ದೆಹಲಿ ವಿಮಾನ ನಿಲ್ದಾಣದಲ್ಲಿ 129 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ದೆಹಲಿ ಮತ್ತು ಇತರ ವಿಮಾನ ನಿಲ್ದಾಣಗಳಲ್ಲಿ ದಟ್ಟವಾದ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿದ್ದು, ವಿಮಾನಗಳ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ.
ಇಲ್ಲಿಗೆ(ದೆಹಲಿ) ಆಗಮಿಸುವ 66 ವಿಮಾನಗಳು ಮತ್ತು ಇಲ್ಲಿಂದ ಹೊರಡುವ 63 ವಿಮಾನಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.