ADVERTISEMENT

Delhi Airport | ದಟ್ಟ ಮಂಜು: 128 ವಿಮಾನಗಳ ಹಾರಾಟ ರದ್ದು

ಪಿಟಿಐ
Published 29 ಡಿಸೆಂಬರ್ 2025, 10:41 IST
Last Updated 29 ಡಿಸೆಂಬರ್ 2025, 10:41 IST
   

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಂದು (ಸೋಮವಾರ) ದಟ್ಟ ಮಂಜು ಕವಿದಿದ್ದರಿಂದ ವಿಮಾನಗಳ ಹಾರಾಟಕ್ಕೆ ಅಡ್ಡಿ ಉಂಟಾಯಿತು. ಕನಿಷ್ಠ 128 ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, 8 ವಿಮಾನಗಳ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಟ್ಟ ಮಂಜು ಮತ್ತು ಕಡಿಮೆ ಗೋಚರತೆ ಕಾರಣ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುವ 64 ಹಾಗೂ ಇಲ್ಲಿಂದ ಹೊರಡುವ 64 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದೆಹಲಿ ಮತ್ತು ಉತ್ತರ ಭಾರತದ ಹಲವು ವಿಮಾನ ನಿಲ್ದಾಣಗಳಲ್ಲಿ ಮಂಜು ಆವರಿಸಿದೆ. ಕಡಿಮೆ ಗೋಚರತೆ ಇರುವುದರಿಂದ ಕೆಲ ವಿಮಾನಗಳ ಸಂಚಾರ ವಿಳಂಬವಾಗುತ್ತಿದೆ ಎಂದು ಇಂಡಿಗೊ ಸಂಸ್ಥೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.