
ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತವರಣ
ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ದಟ್ಟ ಮಂಜು ಕವಿದ ವಾತವರಣವಿದ್ದ ಪರಿಣಾಮ ವಿಮಾನಗಳ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. ಕನಿಷ್ಠ 118 ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, 16 ವಿಮಾನಗಳ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿದಿನ 1,300 ವಿಮಾನಗಳು ಕಾರ್ಯಾಚರಣೆ ನಡೆಸುತ್ತವೆ. ದಟ್ಟ ಮಂಜು ಮತ್ತು ಕಡಿಮೆ ಗೋಚರತೆ ಕಾರಣ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವಿಮಾನಗಳ ಹಾರಾಟದ ಮಾಹಿತಿ ನೀಡುವ ‘ಫ್ಲೈಟ್‌ರಾಡಾರ್–24’ ವೆಬ್‌ಸೈಟ್ ವರದಿ ಮಾಡಿದೆ.
ಮಂಜು ಮತ್ತು ಕಡಿಮೆ ಗೋಚರತೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸೌಲಭ್ಯ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯವು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.